
ಬೆಂಗಳೂರು(ಸೆ.23): ಸ್ಯಾಂಡಲ್‌ವುಡ್ ಸ್ಟಾರ್ ಕಿಚ್ಚ ಸುದೀಪ್ ಅಂತಾರಾಷ್ಟ್ರೀಯ ಕ್ರಿಕೆಟಿಗರ ಜೊತೆ ಉತ್ತಮ ಗೆಳೆತನ ಹೊಂದಿದ್ದಾರೆ. ಇಂಗ್ಲೆಂಡ್‌ನ ಲಾರ್ಡ್ಸ್ ಮೈದಾನದಲ್ಲಿ ಟ್ರೋಫಿ ಗೆದ್ದ ಸಾಧನೆಯನ್ನು ಮಾಡಿದ್ದಾರೆ. ಹೀಗಾಗಿ ಸುದೀಪ್‌ಗೆ ಟೀಂ ಇಂಡಿಯಾ ಕ್ರಿಕೆಟಿಗರು ಮಾತ್ರವಲ್ಲ, ಇಂಗ್ಲೆಂಡ್, ಸೌತ್ ಆಫ್ರಿಕಾ ಸೇರಿದಂತೆ ಹಲವು ಕ್ರಿಕೆಟಿಗರು ಆತ್ಮೀಯರಾಗಿದ್ದಾರೆ. ಇದೀಗ ಪೈಲ್ವಾನ್ ಪೈರಸಿ ವಿವಾದಕ್ಕೆ ಆಕ್ರೋಶಗೊಂಡಿದ್ದ ಸುದೀಪ್, ಅಚ್ಚರಿ ನೀಡಿದ್ದಾರೆ.
ಇದನ್ನೂ ಓದಿ: ಬೆಂಗಳೂರಲ್ಲಿ ಭಾರತದ ಗೆಲುವಿಗೆ ಭಂಗ; ಸರಣಿ ಸಮಬಲ ಮಾಡಿದ ಸೌತ್ ಆಫ್ರಿಕಾ
ಟೀಂ ಇಂಡಿಯಾ ವಿರುದ್ದದ 3ನೇ ಹಾಗೂ ಅಂತಿಮ ಟಿ20 ಪಂದ್ಯ ಗೆದ್ದ ಸೌತ್ ಆಫ್ರಿಕಾ ತಂಡದ ಜೊತೆ ಕಿಚ್ಚ ಸುದೀಪ್ ದುಬೈ ಪ್ರಯಾಣ ಮಾಡಿದ್ದಾರೆ. ಸೌತ್ ಆಫ್ರಿಕಾ ಕ್ರಿಕೆಟಿಗರು ಹಾಗೂ ಕಿಚ್ಚ ಸುದೀಪ್ ಒಂದೇ ವಿಮಾನದಲ್ಲಿ ದುಬೈಗೆ ತೆರಳಿದ್ದಾರೆ. ಈ ವೇಳೆ ಸೌತ್ ಆಫ್ರಿಕಾ ಸ್ಪಿನ್ನರ್ ತಬ್ರರೈಝ್ ಶಮ್ಸಿ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ.
ಇದನ್ನೂ ಓದಿ: KPL ಟ್ರೋಫಿ ಲಾಂಚ್; ವೇದಾಗೆ ಫಿದಾ ಆದ ಸುದೀಪ್!
ಟಿ20 ಸರಣಿ ಮುಗಿಸಿ ತವರಿಗೆ ವಾಪಾಸ್ಸಾಗುತ್ತಿದ್ದ ಸೌತ್ ಆಫ್ರಿಕಾ ಕ್ರಿಕೆಟಿಗರು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನದ ನಿಲ್ದಾಣದ ಮೂಲಕ ದುಬೈಗೆ ತೆರಳುತ್ತಿದ್ದರು. ಇದೇ ವಿಮಾನದಲ್ಲಿ ಕಿಚ್ಚ ಸುದೀಪ್, ತಮ್ಮ ಕೋಟಿಗೊಬ್ಬ 3 ಸಿನಿಮಾದ ಚಿತ್ರೀಕರಣಕ್ಕೆ ದುಬೈಗೆ ತೆರಳುತ್ತಿದ್ದರು. ಒಂದೇ ವಿಮಾನದಲ್ಲಿ ಸುದೀಪ್ ಹಾಗೂ ಸೌತ್ ಆಫ್ರಿಕಾ ಕ್ರಿಕೆಟಿಗರು ಪ್ರಯಾಣಿಸಿದ್ದಾರೆ. ಈ ವೇಳೆ ತಬ್ರರೈಝ್ ಶಮ್ಸಿ ಜೊತೆ ಸುದೀಪ್ ಸೆಲ್ಫಿ ಕ್ಲಿಕ್ಲಿಸಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.
ಇದನ್ನೂ ಓದಿ: ಕಾರ್ಪೊರೇಟ್ ಕಪ್- ಲಾರ್ಡ್ಸ್‌ನಲ್ಲಿ ಕಿಚ್ಚ ಸುದೀಪ್ ಟೀಂ ಚಾಂಪಿಯನ್!
ರಾಯಲ್ ಚಾಲೆಜಂರ್ಸ್ ಬೆಂಗಳೂರು ತಂಡದಲ್ಲಿ ಆಡಿರುವ ತಬ್ರಾರ್ ಶಮ್ಸಿ ಹಾಗೂ ಟೀಂ ಇಂಡಿಯಾದ ಕೆಎಲ್ ರಾಹುಲ್ ಆತ್ಮೀಯ ಗೆಳೆಯರಾಗಿದ್ದಾರೆ. ಇತ್ತ ಕಿಚ್ಚ ಸುದೀಪ್ ಸಿನಿಮಾ ರಂಗದ ಜೊತೆಗೆ ಕ್ರಿಕೆಟ್‌ನಲ್ಲೂ ಗುರಿತಿಸಿಕೊಂಡಿದ್ದಾರೆ. ಇದೀಗ ಕೋಟಿಗೊಬ್ಬ 3 ಚಿತ್ರದ ಚೇಸಿಂಗ್ ಸೀಕ್ವೆನ್ಸ್ ಶೂಟಿಂಗ್ ಬೆಲ್‌ಗ್ರೇಡ್‌ನಲ್ಲಿ ನಡೆಯುತ್ತಿದೆ. ಇದಕ್ಕಾಗಿ ಕಿಚ್ಚ ಸುದೀಪ್ ತೆರಳಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.