
ಮುಂಬೈ(ಮಾ.21): ಐಪಿಎಲ್ 11ನೇ ಆವೃತ್ತಿಯ ಎಲಿಮಿನೇಟರ್ ಹಾಗೂ 2ನೇ ಕ್ವಾಲಿಫೈಯರ್ ಪಂದ್ಯಗಳಿಗೆ ಪುಣೆ ಆತಿಥ್ಯ ವಹಿಸಲಿದೆ.
ಐಪಿಎಲ್ ಆಡಳಿತ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು ಎಂದು ಬಿಸಿಸಿಐ ತಿಳಿಸಿದೆ. ಇದೇ ವೇಳೆ ಕಿಂಗ್ಸ್ ಇಲೆವೆನ್ ತಂಡ ತನ್ನ ಮೊದಲ ಮೂರು ತವರಿನ ಪಂದ್ಯಗಳನ್ನು ಮೊಹಾಲಿಯಲ್ಲಿ ಆಡಲಿದ್ದು, ನಂತರದ ನಾಲ್ಕು ಪಂದ್ಯಗಳನ್ನು ಇಂದೋರ್'ನಲ್ಲಿ ಆಡಲಿದೆ.
ಕಿಂಗ್ಸ್ XI ಪಂಜಾಬ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ (ಮೇ.4), ರಾಜಸ್ತಾನ ರಾಯಲ್ಸ್(ಮೇ.6), ಕೊಲ್ಕತಾ ನೈಟ್'ರೈಡರ್ಸ್(ಮೇ.12) ಹಾಗೂ ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ತಂಡದ ಎದುರು ಮೇ.14 ರಂದು ಇಂದೋರ್'ನಲ್ಲಿ ಸೆಣಸಲಿದೆ.
ಇದನ್ನೂ ಓದಿ: ತವರಿನ ಕೊನೆ 2 ಪಂದ್ಯಗಳ ವೇಳಾಪಟ್ಟಿ ಬದಲಿಸಲು ಬಿಸಿಸಿಐಗೆ ಪಂಜಾಬ್ ಮನವಿ
ಮೇ ತಿಂಗಳಲ್ಲಿ ಚಂಡೀಗಢ ವಿಮಾನ ನಿಲ್ದಾಣದ ದುರಸ್ಥಿ ಕಾರ್ಯ ನಡೆಯಲಿರುವುದರಿಂದ ವೇಳಾಪಟ್ಟಿ ಬದಲಿಸಲು ಕಿಂಗ್ಸ್ ತಂಡ ಮನವಿ ಮಾಡಿತ್ತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.