
ಗಾಲೆ[ಆ.16]: ನ್ಯೂಜಿಲೆಂಡ್ ವೇಗದ ಬೌಲರ್ ಟಿಮ್ ಸೌಥಿ ಸಿಕ್ಸರ್ ಸಿಡಿಸುವುದರಲ್ಲಿ ಅಪರೂಪದ ದಾಖಲೆ ದಾಖಲೆ ಬರೆದಿದ್ದು, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ ದಾಖಲೆಯನ್ನು ಸರಿಗಟ್ಟಿದ್ದಾರೆ. ಶ್ರೀಲಂಕಾ ವಿರುದ್ಧದ ಟೆಸ್ಟ್ ಕ್ರಿಕೆಟ್‌ನಲ್ಲಿ ಸೌಥಿ, ಸಚಿನ್ ತೆಂಡುಲ್ಕರ್ ಬಾರಿಸಿದ್ದ ಸಿಕ್ಸರ್‌ಗಳನ್ನು ಸರಿಗಟ್ಟಿದ್ದಾರೆ.
ವಿಂಡೀಸ್ ಎದುರು ಅಬ್ಬರಿಸಿದ ಕೊಹ್ಲಿ; ನಿರ್ಮಾಣವಾದ್ವು ಅಪರೂಪದ ದಾಖಲೆ
ಕ್ರಿಕೆಟ್ ದಂತಕಥೆ ಸಚಿನ್ ತೆಂಡುಲ್ಕರ್ ಟೆಸ್ಟ್ ಕ್ರಿಕೆಟ್‌ನಲ್ಲಿ 200 ಪಂದ್ಯಗಳನ್ನಾಡಿ 69 ಸಿಕ್ಸರ್ ಸಿಡಿಸಿದ್ದರು. ಇದೀಗ ಶ್ರೀಲಂಕಾ 10ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸೌಥಿ ಲಂಕಾ ಸ್ಪಿನ್ನರ್ ಧನಂಜಯ ಡಿ ಸಿಲ್ವಾ ಬೌಲಿಂಗ್‌ನಲ್ಲಿ ಸಿಕ್ಸರ್ ಬಾರಿಸುವ ಮೂಲಕ ತೆಂಡುಲ್ಕರ್ ದಾಖಲೆಯನ್ನು ಸರಿಗಟ್ಟಿದ್ದಾರೆ. ಸಚಿನ್ ತೆಂಡುಲ್ಕರ್ 69 ಸಿಕ್ಸರ್ ಸಿಡಿಸಲು 329 ಇನಿಂಗ್ಸ್ ತೆಗೆದುಕೊಂಡರೆ, ಸೌಥಿ ಕೇವಲ 89 ಇನಿಂಗ್ಸ್‌ಗಳಲ್ಲಿ 69 ಸಿಕ್ಸರ್ ಬಾರಿಸಿದ ಸಾಧನೆ ಮಾಡಿದ್ದಾರೆ. ಇದರೊಂದಿಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ಗರಿಷ್ಠ ಸಿಕ್ಸರ್ ಸಿಡಿಸಿದ ಆಟಗಾರರ ಪಟ್ಟಿಯಲ್ಲಿ ಜಂಟಿ 17ನೇ ಸ್ಥಾನ ಹಂಚಿಕೊಂಡಿದ್ದಾರೆ. ಇನ್ನೊಂದು ಸಿಕ್ಸರ್ ಸಿಡಿಸಿದರೆ, ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಯೂನುಸ್ ಖಾನ್[70 ಸಿಕ್ಸರ್ 213 ಇನಿಂಗ್ಸ್] ಅವರನ್ನು ಸರಿಗಟ್ಟಲಿದ್ದಾರೆ.
ಕ್ರಿಕೆಟ್ ಅಭಿಮಾನಿಗಳಿಗಿದು ಸಿಹಿ ಸುದ್ದಿ: ದಶಕಗಳ ಕನಸು ನನಸು..?
ನ್ಯೂಜಿಲೆಂಡ್ ಮಾಜಿ ಕ್ರಿಕೆಟಿಗ ಬ್ರೆಂಡನ್ ಮೆಕ್ಲಮ್ ಟೆಸ್ಟ್ ಕ್ರಿಕೆಟ್‌ನಲ್ಲಿ ಗರಿಷ್ಠ ಸಿಕ್ಸರ್ ಸಿಡಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ 107 ಸಿಕ್ಸರ್‌ಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾ ಮಾಜಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಆ್ಯಡಂ ಗಿಲ್‌ಕ್ರಿಸ್ಟ್ ನೂರು ಸಿಕ್ಸರ್ ಸಿಡಿಸಿದ ಮತ್ತೊಬ್ಬ ಕ್ರಿಕೆಟಿಗ ಎನಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.