ಮತ್ತೊಂದು ಸೋಲಿಗೆ ಸಾಕ್ಷಿಯಾದ ಆರ್’ಸಿಬಿ

Published : Apr 30, 2018, 12:29 AM IST
ಮತ್ತೊಂದು ಸೋಲಿಗೆ ಸಾಕ್ಷಿಯಾದ ಆರ್’ಸಿಬಿ

ಸಾರಾಂಶ

ಕ್ರಿಸ್ ಲಿನ್ ಸಮಯೋಚಿತ ಅರ್ಧಶತಕದ ನೆರವಿನಿಂದ ಕೋಲ್ಕತಾ ನೈಟ್’ರೈಡರ್ಸ್ 6 ವಿಕೆಟ್’ಗಳ ಭರ್ಜರಿ ಜಯ ಸಾಧಿಸಿದರೆ, ರಾಯಲ್ ಚಾಲೆಂಜರ್ಸ್ ಟೂರ್ನಿಯಲ್ಲಿ 5ನೇ ಸೋಲು ಕಂಡಿತು.ಕ್ರಿಸ್ ಲಿನ್ ಸಮಯೋಚಿತ ಅರ್ಧಶತಕದ ನೆರವಿನಿಂದ ಕೋಲ್ಕತಾ ನೈಟ್’ರೈಡರ್ಸ್ 6 ವಿಕೆಟ್’ಗಳ ಭರ್ಜರಿ ಜಯ ಸಾಧಿಸಿದರೆ, ರಾಯಲ್ ಚಾಲೆಂಜರ್ಸ್ ಟೂರ್ನಿಯಲ್ಲಿ 5ನೇ ಸೋಲು ಕಂಡಿತು.

ಬೆಂಗಳೂರು(ಏ.30): ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವಿನ ಹಳಿಗೆ ಮರಳಲು ಮತ್ತೊಮ್ಮೆ ವಿಫಲವಾಗಿದೆ. ಇಂದಾದರೂ ಆರ್’ಸಿಬಿ ಗೆಲ್ಲಬಹುದು ಎಂಬ ನಿರೀಕ್ಷೆಯಲ್ಲಿದ್ದ ಬೆಂಗಳೂರಿನ ಅಭಿಮಾನಿಗಳಿಗೆ ವಿರಾಟ್ ಪಡೆ ಮತ್ತೆ ನಿರಾಸೆ ಮಾಡಿದೆ

ಕ್ರಿಸ್ ಲಿನ್ ಸಮಯೋಚಿತ ಅರ್ಧಶತಕದ ನೆರವಿನಿಂದ ಕೋಲ್ಕತಾ ನೈಟ್’ರೈಡರ್ಸ್ 6 ವಿಕೆಟ್’ಗಳ ಭರ್ಜರಿ ಜಯ ಸಾಧಿಸಿದರೆ, ರಾಯಲ್ ಚಾಲೆಂಜರ್ಸ್ ಟೂರ್ನಿಯಲ್ಲಿ 5ನೇ ಸೋಲು ಕಂಡಿತು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ನೀಡಿದ್ದ 176 ರನ್’ಗಳ ಗುರಿ ಬೆನ್ನತ್ತಿದ ಕೆಕೆಆರ್ ಉತ್ತಮ ಆರಂಭವನ್ನೇ ಪಡೆಯಿತು. ಕ್ರಿಸ್ ಲಿನ್ ಹಾಗೂ ಸುನಿಲ್ ನರೈನ್ ಮೊದಲ ವಿಕೆಟ್’ಗೆ 59 ರನ್’ಗಳ ಜತೆಯಾಟವಾಡಿದರು. ನರೈನ್ 27 ರನ್ ಸಿಡಿಸಿ ಮುರುಗನ್ ಅಶ್ವಿನ್’ಗೆ ವಿಕೆಟ್ ಒಪ್ಪಿಸಿದರು. ಆ ಬಳಿಕ ಉತ್ತಪ್ಪ ಜತೆ ಇನಿಂಗ್ಸ್ ಕಟ್ಟಿದ ಲಿನ್ ತಂಡದ ಮೊತ್ತವನ್ನು ನೂರರ ಗಡಿ ದಾಟಿಸಿದರು. ಉತ್ತಪ್ಪ 36 ರನ್ ಬಾರಿಸಿದರು. ರಾಣಾ 15 ರನ್ ಬಾರಿಸಿ ರಿಟೈರ್ಡ್ ಹಟ್ ತೆಗೆದುಕೊಂಡರು. ಕೊನೆಯಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿದ ದಿನೇಶ್ ಕಾರ್ತಿಕ್ ಕೇವಲ 10 ಎಸೆತಗಳಲ್ಲಿ 23 ರನ್ ಬಾರಿಸಿ ಕೆಕೆಆರ್ ಗೆಲುವನ್ನು ಸುಲಭಗೊಳಿಸಿದರು. ಒಂದುಕಡೆ ವಿಕೆಟ್ ಉರುಳುತ್ತಿದ್ದರೂ ಮತ್ತೊಂದೆಡೆ ದಿಟ್ಟವಾಗಿ ಬ್ಯಾಟಿಂಗ್ ನಡೆಸಿದ ಕ್ರಿಸ್ ಲಿನ್ ಅಜೇಯ 62 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

ಇದಕ್ಕೂ ಮೊದಲು ನಾಯಕ ವಿರಾಟ್ ಕೊಹ್ಲಿ(68), ಬ್ರೆಂಡನ್ ಮೆಕ್ಲಮ್(38) ಬ್ಯಾಟಿಂಗ್ ನೆರವಿನಿಂದ ಆರ್’ಸಿಬಿ 175 ರನ್ ಗಳಿಸಿತ್ತು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಇವತ್ತು 10/10 ಎಂದ ಮಾಸ್ಟರ್ ಬ್ಲಾಸ್ಟರ್! ಸಚಿನ್‌ ತೆಂಡೂಲ್ಕರ್‌ಗೆ ಅಪರೂಪದ ಗಿಫ್ಟ್ ಕೊಟ್ಟ ಮೆಸ್ಸಿ!
ನಾನು ಫಾರ್ಮ್ ಕಳೆದುಕೊಂಡಿಲ್ಲ, ಆದ್ರೆ..! 3ನೇ ಟಿ20 ಪಂದ್ಯದ ಗೆಲುವಿನ ಬೆನ್ನಲ್ಲೇ ಸೂರ್ಯ ಅಚ್ಚರಿ ಹೇಳಿಕೆ!