ಟಾಸ್ ಗೆದ್ದ KKR ಫೀಲ್ಡಿಂಗ್ ಆಯ್ಕೆ- RCBಯಲ್ಲಿ ಮಹತ್ತರ ಬದಲಾವಣೆ!

Published : Apr 19, 2019, 07:34 PM ISTUpdated : Apr 19, 2019, 08:07 PM IST
ಟಾಸ್ ಗೆದ್ದ KKR ಫೀಲ್ಡಿಂಗ್ ಆಯ್ಕೆ- RCBಯಲ್ಲಿ ಮಹತ್ತರ ಬದಲಾವಣೆ!

ಸಾರಾಂಶ

ಕೋಲ್ಕತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯುತ್ತಿರುವ KKR ಹಾಗೂ RCB ನಡುವಿನ ಪಂದ್ಯ ಹಲವು ಕುತೂಹಲ ಕೆರಳಿಸಿದೆ. ಎರಡೂ ತಂಡಕ್ಕೂ  ಗೆಲುವು ಅನಿವಾರ್ಯವಾಗಿದೆ. ಈಗಾಗಲೇ ಟಾಸ್ ಗೆದ್ದಿರು  KKR ಫೀಲ್ಡಿಂಗ್ ಆಯ್ಕೆ ಮಾಡಿದೆ. ಉಭಯ ತಂಡದಲ್ಲಿನ ಬದಲಾವಣೆ ಏನು? ಇಲ್ಲಿದೆ ವಿವರ.

ಕೋಲ್ಕತಾ(ಏ.19): ಸೋಲಿನಿಂದ ಕಂಗೆಟ್ಟಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಆತಿಥೇಯ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ  ಹೋರಾಟ ನಡೆಸಲಿದೆ. ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ  KKR ಫೀಲ್ಡಿಂಗ್ ಆಯ್ಕೆ ಮಾಡಿದೆ.  RCB ಸ್ಟಾರ್ ಕ್ರಿಕೆಟಿಗ ಎಬಿ ಡಿವಿಲಿಯರ್ಸ್ ಇಂದಿನ ಪಂದ್ಯ ಅಲಭ್ಯರಾಗಿದ್ದಾರೆ. ಎಬಿಡಿ ಬದಲು ಹೆನ್ರಿಚ್ ಕ್ಲಾಸಿನ್ ತಂಡ ಸೇರಿಕೊಂಡಿದ್ದರೆ, ಸೌತ್ ಆಫ್ರಿಕಾ ವೇಗಿ ಡೇಲ್ ಸ್ಟೇನ್ ಕೂಡ ತಂಡಕ್ಕೆ ಆಗಮಿಸಿದ್ದಾರೆ.

ಇದನ್ನೂ ಓದಿ: ಮಕ್ಕಳೊಂದಿಗೆ ಗಲ್ಲಿ ಕ್ರಿಕೆಟ್ ಆಡಿದ ಐಪಿಎಲ್ ಸ್ಟಾರ್ಸ್!

RCB ಆಡಿದ 8 ಪಂದ್ಯದಲ್ಲಿ 1ರಲ್ಲಿ ಮಾತ್ರ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಇಂದಿನ ಪಂದ್ಯದಲ್ಲಿ ಗೆಲುವು ಸಾಧಿಸಿ ಸೋಲಿನಿಂದ ಹೊರಬರಲು ಕೊಹ್ಲಿ ಪಡೆ ಸಜ್ಜಾಗಿದೆ. ಇತ್ತ ಕೋಲ್ಕತಾ ನೈಟ್ ರೈಡರ್ಸ್ 8ರಲ್ಲಿ 4 ಪಂದ್ಯ ಗೆದ್ದು ನಾಲ್ಕರಲ್ಲಿ ಸೋಲು ಕಂಡಿದೆ. ಹೀಗಾಗಿ 6ನೇ ಸ್ಥಾನದಲ್ಲಿದೆ. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಬ್ಬಬ್ಬಾ..! ಲಿಯೋನೆಲ್ ಮೆಸ್ಸಿ ಹೋಟೆಲ್‌ನಲ್ಲಿ ಉಳಿದುಕೊಳ್ಳುವ ಒಂದು ದಿನದ ಚಾರ್ಜ್ ಇಷ್ಟೊಂದಾ?
ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಅಂಕಪಟ್ಟಿಯಲ್ಲಿ ಮತ್ತಷ್ಟು ಪಾತಾಳಕ್ಕೆ ಕುಸಿದ ಟೀಂ ಇಂಡಿಯಾ!