
ಸಿಡ್ನಿ[ನ.30]: ಆಸ್ಪ್ರೇಲಿಯಾದಲ್ಲಿ ಟಿ20 ಸರಣಿ ಬಳಿಕ ಅಭ್ಯಾಸ ಪಂದ್ಯದಲ್ಲೂ ವೈಫಲ್ಯ ಅನುಭವಿಸಿದ ಆರಂಭಿಕ ಬ್ಯಾಟ್ಸ್‌ಮನ್ ಕೆ.ಎಲ್.ರಾಹುಲ್ ವಿರುದ್ಧ ಬ್ಯಾಟಿಂಗ್ ಕೋಚ್ ಸಂಜಯ್ ಬಾಂಗರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅಭ್ಯಾಸ ಪಂದ್ಯದಲ್ಲಿ ರಾಹುಲ್ ಕೇವಲ 3 ರನ್‌ಗೆ ಔಟಾದ ನಂತರ, ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಾಂಗರ್, ‘ರಾಹುಲ್ ಔಟ್ ಆಗಲು ಹೊಸ ದಾರಿಗಳನ್ನು ಹುಡುಕಿಕೊಳ್ಳುತ್ತಿದ್ದಾರೆ. ಅನವಶ್ಯಕವಾಗಿ ಆಫ್‌ಸ್ಟಂಪ್‌ನಿಂದ ಆಚೆ ಹೋಗುವ ಎಸೆತಗಳನ್ನು ಕೆಣಕಿ ವಿಕೆಟ್ ಚೆಲ್ಲುತ್ತಿದ್ದಾರೆ. ಆದರೆ ಕೇವಲ ಒಂದೇ ಒಂದು ದೊಡ್ಡ ಇನ್ನಿಂಗ್ಸ್ ಅವರು ಆತ್ಮವಿಶ್ವಾಸ ಮರಳಿ ಪಡೆಯುವಂತೆ ಮಾಡಲಿದೆ. ಆ ದಿನವನ್ನು ಎದುರು ನೋಡುತ್ತಿದ್ದೇವೆ’ ಎಂದರು.
ಅಭ್ಯಾಸ ಪಂದ್ಯದಲ್ಲಿ ವಿರಾಟ್ ಕೊಹ್ಲಿ, ಪೃಥ್ವಿ ಶಾ ಸೇರಿದಂತೆ ಭಾರತದ ಐವರು ಬ್ಯಾಟ್ಸ್’ಮನ್’ಗಳು ಅರ್ಧಶತಕ ಸಿಡಿಸಿ ಮಿಂಚಿದರು. ಆದರೆ ರಾಹುಲ್ ಮಾತ್ರ ಅದೇ ಚಾಳಿಯನ್ನೇ ಮುಂದುವರೆಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.