
ಮುಂಬೈ(ಮೇ.31) ಐಪಿಎಲ್ ಮುಗಿಸಿ ವಿಶ್ರಾಂತಿಗೆ ಜಾರಿರುವ ಟೀಮ್ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್, ಇದೀಗ ಮುಂಬೈನಲ್ಲಿ ಬಾಲಿವುಡ್ ನಟಿ ನಿಧಿ ಅಗರ್ವಾಲ್ ಜೊತೆ ಕಾಣಿಸಿಕೊಂಡಿದ್ದಾರೆ. ಮುಂಬೈನ ಖಾಸಗಿ ರೆಸ್ಟೋರೆಂಟ್ ಒಂದರಲ್ಲಿ ರಾಹುಲ್ ಹಾಗು ನಿಧಿ ಪ್ರತ್ಯಕ್ಷವಾಗಿದ್ದಾರೆ. ಬಳಿಕ ಕಾರಿನಲ್ಲಿ ತೆರಳಿದ ಕನ್ನಡಿಗ ರಾಹುಲ್ ಹಾಗೂ ನಿಧಿ ಅಭಿಮಾನಿಗಳ ಕುತೂಹಲ ಹೆಚ್ಚಿಸಿದ್ದಾರೆ.
ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಅಬ್ಬರಿಸಿರುವ ಕೆಎಲ್ ರಾಹುಲ್ 14 ಪಂದ್ಯದಿಂದ 659 ರನ್ ಸಿಡಿಸಿದ್ದಾರೆ. ಕೇವಲ 14 ಎಸೆತದಲ್ಲಿ ಅರ್ಧಶತಕ ಸಿಡಿಸಿ ದಾಖಲೆ ಬರೆದಿರುವ ರಾಹುಲ್ ಈ ಆವೃತ್ತಿಯಲ್ಲಿ 6 ಅರ್ಧಶತಕ ಬಾರಿಸಿದ್ದಾರೆ. ಐಪಿಎಲ್ ಬಳಿಕ ಅಲ್ಪ ಸತತ ಕ್ರಿಕೆಟ್‌ನಿಂದ ವಿಶ್ರಾಂತಿ ಪಡೆದ ರಾಹುಲ್, ಜೂನ್ 14 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ ರಾಹುಲ್ ಕಣಕ್ಕಿಳಿಯಲಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.