
ಮುಂಬೈ(ಅ.06): ಟೀಂ ಇಂಡಿಯಾ ಆಲ್ರೌಂಡರ್ ಹಾರ್ದಿಕ್ ಪಾಂಡ್ಯಾಗೆ ಯಶಸ್ವಿ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಬೆನ್ನು ನೋವಿನಿಂದ ಬಳಸುತ್ತಿದ್ದ ಪಾಂಡ್ಯ ಲಂಡನ್‌ನಲ್ಲಿ ಸರ್ಜರಿ ಮಾಡಿದ್ದಾರೆ. ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿ ಆಡಿದ್ದ ಹಾರ್ದಿಕ್ ಪಾಂಡ್ಯ ಇಂಜುರಿ ಕಾರಣದಿಂದ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದರು. ಇದೀಗ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿರುವ ಪಾಂಡ್ಯ ವಿಶ್ರಾಂತಿಗೆ ಜಾರಿದ್ದಾರೆ. ಶಸ್ತ್ರಿ ಚಿಕಿತ್ಸೆ ಬಳಿಕ ಫೋಟೋ ಹಂಚಿಕೊಂಡಿದ್ದ ಹಾರ್ದಿಕ್ ಪಾಂಡ್ಯನನ್ನು, ಗೆಳೆಯ, ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ಟ್ರೋಲ್ ಮಾಡಿದ್ದಾರೆ.
ಇದನ್ನೂ ಓದಿ: ಹಾರ್ದಿಕ್ ಪಾಂಡ್ಯಾಗೆ ಯಶಸ್ವಿ ಸರ್ಜರಿ; ಫ್ಯಾನ್ಸ್‌ಗೆ ಕ್ರಿಕೆಟಿಗನ ಸಂದೇಶ!
ಟೀಂ ಇಂಡಿಯಾ ಟೆಸ್ಟ್ ತಂಡದಿಂದ ಹೊರಬಿದ್ದಿರುವ ರಾಹುಲ್, ಸದ್ಯ ವಿಜಯ್ ಹಜಾರೆ ಟೂರ್ನಿಯಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಇದರ ನಡುವೆ ಹಾರ್ದಿಕ್ ಪಾಂಡ್ಯನನ್ನು ಟ್ರೋಲ್ ಮಾಡಿದ್ದಾರೆ. ಪಾಂಡ್ಯ ಶಸ್ತ್ರಚಿಕಿತ್ಸೆ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿರುವ ರಾಹುಲ್, ಶೀಘ್ರದಲ್ಲೇ ಚೇತರಿಸಿಕೊಳ್ಳಿ ಎಂದು ಹಾರೈಸಿದ್ದಾರೆ. ಇಷ್ಟೇ ಅಲ್ಲ, ಬೆನ್ನು ನೋವಿನ ಜೊತೆಗೆ ಮೆದುಳಿಗೂ ಶಸ್ತ್ರ ಚಿಕಿತ್ಸೆ ಮಾಡಿದ್ದಾರೆ ಭಾವಿಸುತ್ತೇನೆ ಎಂದು ರಾಹುಲ್ ಪ್ರತಿಕ್ರಿಯಿಸಿದ್ದಾರೆ.
ಇದನ್ನೂ ಓದಿ: ನನ್ನ ನೀ ಗೆಲ್ಲಲಾರೆ, ತಿಳಿದು ತಿಳಿದು ಅನುಕರಣೆ ಏತಕೆ? ಡಿಕಾಕ್‌ಗೆ ಚಹಾಲ್ ಸವಾಲ್!
ಹಾರ್ದಿಕ್ ಪಾಂಡ್ಯ ಹಾಗೂ ಕೆಎಲ್ ರಾಹುಲ್ ಆತ್ಮೀಯ ಗೆಳೆಯರು. ಇವರಿಬ್ಬರು ಜೊತೆಯಾಗಿ ಬಾಲಿವುಡ್ ನಿರ್ದೇಶಕ ನಡೆಸಿಕೊಡುವ ಕಾಫಿ ವಿತ್ ಕರಣ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ತಂಡದಿಂದ ಅಮಾನತ್ತಾಗಿದ್ದರು. ಸಂದರ್ಶನದಲ್ಲಿ ಹಲವು ಬಾರಿ ಹಾರ್ದಿಕ್ ಪಾಂಡ್ಯ ಕುರಿತು ಮಾತನಾಡಿದ್ದಾರೆ. ಪಾಂಡ್ಯ ಯೋಚನೆ ಮಾಡದೇ ಮಾತನಾಡುತ್ತಾರೆ ಎಂದಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.