ಕೊಡಗು ಜಿಲ್ಲಾ ಮಟ್ಟದ ಅಂತರ್‌ ಕಾಲೇಜು ಸ್ವಾತಂತ್ರ್ಯ ಓಟ ಸ್ಪರ್ಧೆ

By Kannadaprabha News  |  First Published Jul 28, 2022, 10:17 AM IST

ಆಜಾದಿ ಕಾ ಅಮೃತ್‌ ಮಹೋತ್ಸವ ಪ್ರಯುಕ್ತ  ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದಿಂದ ಅಂತರ್ ಜಿಲ್ಲಾ ಕ್ರೀಡಾಕೂಟ ಆಯೋಜಿಸಿಲಾಗಿತ್ತು.


ಮಡಿಕೇರಿ (ಜು.28) : ಸಾಧನೆಗಳನ್ನು ಸಾಕಾರಗೊಳಿಸಲು ಸತತ ಪ್ರಯತ್ನ ಅಗತ್ಯ ಎಂದು ಆಜಾದಿ ಕಾ ಅಮೃತ್‌ ಮಹೋತ್ಸವದ ಜಿಲ್ಲಾ ನೋಡಲ್‌ ಅಧಿಕಾರಿ ಡಾ. ಮೇಜರ್‌ ರಾಘವ್‌ ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದಿಂದ ಆಯೋಜಿಸಿದ ಆಜಾದಿ ಕಾ ಅಮೃತ್‌ ಮಹೋತ್ಸವ((Azadi ka Amrit Mahotsav)ಪ್ರಯುಕ್ತ ಕೊಡಗು(Kodagu) ಜಿಲ್ಲಾ ಮಟ್ಟದ ಅಂತರ್‌ ಕಾಲೇಜು ಸ್ವಾತಂತ್ರ್ಯ ಓಟದಲ್ಲಿ ವಿಜೇತರಿಗೆ ಪ್ರಶಸ್ತಿ ಪತ್ರ ವಿತರಿಸಿ ಮಾತನಾಡಿದ ಅವರು, ಮನಸ್ಸಿದ್ದರೆ ಮಾರ್ಗ ಎನ್ನುವಂತೆ ವಿದ್ಯಾರ್ಥಿಗಳು ತಮಗೆ ಆಸಕ್ತಿ ಇರುವ ಕ್ಷೇತ್ರದಲ್ಲಿ ಸಾಧನೆ ಮಾಡುವುದು ಬಹಳ ಸುಲಭ. ಆದರೆ ಸತತ ಪ್ರಯತ್ನ ಮತ್ತು ಪರಿಶ್ರಮ ಬಹಳ ಮುಖ್ಯ. ವಿದ್ಯಾರ್ಥಿಗಳು ಪ್ರತಿಯೊಬ್ಬ ಸಾಧಕನ ಹಿಂದಿನ ಇತಿಹಾಸವನ್ನು ಓದಿ ಅರ್ಥೈಸಿಕೊಂಡು ಮುನ್ನಡೆಯಿರಿ ಎಂದರು.

Tap to resize

Latest Videos

ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಕ್ರೀಡಾಕೂಟ, ಆಹಾರ ಹಬ್ಬ, 50 ದೇಶದ ವಿದ್ಯಾರ್ಥಿಗಳು ಭಾಗಿ!

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಫೀಲ್ಡ್‌ ಮಾರ್ಷಲ್‌ ಕೆ.ಎಂ. ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಡಾ.ಸಿ. ಜಗತ್‌ ತಿಮ್ಮಯ್ಯ ಮಾತನಾಡಿ, ಸೋಲು ಗೆಲುವು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಆದ್ದರಿಂದ ಎರಡನ್ನೂ ಸಮ ಮನಸ್ಥಿತಿಯಿಂದ ಸ್ವೀಕರಿಸಿಕೊಂಡು ಹೋಗುವಂತೆ ಸ್ಪರ್ಧಾಳುಗಳಿಗೆ ಶುಭ ಕೋರಿದರು.

ಪುರುಷರ ಸ್ವಾತಂತ್ರ ಓಟ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಫೀಲ್ಡ… ಮಾರ್ಷಲ್‌ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌.ಎಚ್‌. ಮುರಳಿಧರ, ದ್ವಿತೀಯ ಸ್ಥಾನ ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್‌. ಸಂದೀಪ್‌, ತೃತೀಯ ಸ್ಥಾನ ಗೋಣಿಕೊಪ್ಪ ಕಾವೇರಿ ಕಾಲೇಜಿನ ಮೊನಿಶ್‌ ಮೇದಪ್ಪ.

ಮಹಿಳೆಯರ ವಿಭಾಗದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನವನ್ನು ಫೀಲ್ಡ್‌ ಮಾರ್ಷಲ್‌ ಕೆ.ಎಂ. ಕಾರ್ಯಪ್ಪ ಕಾಲೇಜಿನ ಅಪ್ಸರಾ ಎಚ್‌.ಎ. ಮತ್ತು ಧುನುಶ್ರೀ ಎಚ್‌.ಜಿ. ಹಾಗೂ ತೃತೀಯ ಸ್ಥಾನವನ್ನು ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪಿ.ಎನ್‌. ಚೈತ್ರ ಪಡೆದುಕೊಂಡರು.

ಕೆಸರುಗದ್ದೆ ಕ್ರೀಡಾಕೂಟದಲ್ಲಿ ಮಿಂದೆದ್ದ ಕ್ರೀಡಾಪಟುಗಳು

ಈ ಸಂದರ್ಭದಲ್ಲಿ ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಪ್ರೊ.ಎಂ.ಎನ್‌. ಪ್ರಕಾಶ್‌, ಇತಿಹಾಸ ವಿಭಾಗದ ಪ್ರೊ.ಟಿ.ಎಲ್‌. ತ್ಯಾಗರಾಜು, ದೈಹಿಕ ಶಿಕ್ಷಣ ನಿರ್ದೇಶಕರಾದ ಎವರೆಸ್ವ್‌ ರೋಡ್ರಿಗಸ್‌, ಫೀಲ್ಡ್‌ ಮಾರ್ಷಲ್‌ ಕೆ.ಎಂ. ಕಾರ್ಯಪ್ಪ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಪವನ್‌ಕೃಷ್ಣ, ರಮೇಶ್‌ ಹಾಗೂ ಪ್ರವಾಸೋದ್ಯಮ ವಿಭಾಗದ ಪ್ರೊ. ಹರ್ಷಿತ್‌ ಉಪಸ್ಥಿತರಿದ್ದರು.

click me!