
ನವದೆಹಲಿ[ಸೆ.26]: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ಅನಗತ್ಯ ಪ್ರಯೋಗಗಳನ್ನು ಮಾಡಬಾರದು ಎಂದಿದ್ದಾರೆ. ಜತೆಗೆ ಟೆಸ್ಟ್ ಪಂದ್ಯವನ್ನು ಸಾಂಪ್ರದಾಯಿಕ 5 ದಿನಗಳಿಂದ 4 ದಿನಗಳಿಗೆ ಇಳಿಸುವುದಕ್ಕೂ ವಿರೋಧ ವ್ಯಕ್ತಪಡಿಸಿದ್ದಾರೆ.
‘ಟೆಸ್ಟ್ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ತೋರಿದಾಗ ಆಗುವ ಸಂತೋಷವನ್ನು ಬಣ್ಣಿಸಲು ಸಾಧ್ಯವಿಲ್ಲ. ಟೆಸ್ಟ್ ಮಾದರಿ ಎಷ್ಟು ಕಠಿಣವಾದದ್ದು ಎನ್ನುವುದು ಎಲ್ಲರಿಗೂ ಗೊತ್ತಿದೆ. ಕ್ರಿಕೆಟ್‌ನ ಅತಿ ಸುಂದರ ಮಾದರಿ ಅದು. ಯಾವುದೇ ಕಾರಣಕ್ಕೂ ಪಂದ್ಯವನ್ನು 4 ದಿನಗಳಿಗೆ ಸೀಮಿತಗೊಳಿಸಬಾರದು’ ಎಂದು ಕೊಹ್ಲಿ ಹೇಳಿದ್ದಾರೆ. ಇದೇ ವೇಳೆ ಐಸಿಸಿ ಟೆಸ್ಟ್ ಚಾಂಪಿಯನ್‌ಶಿಪ್‌ಗೆ ವಿರಾಟ್ ಮೆಚ್ಚುಗೆ ವ್ಯಕ್ತಪಡಿಸಿದ್ದು, ಟೆಸ್ಟ್ ಕ್ರಿಕೆಟ್ ಜನಪ್ರಿಯತೆ ಹೆಚ್ಚಲಿದೆ ಎಂದು ಅಭಿಪ್ರಾಯಿಸಿದ್ದಾರೆ.
ಎಂ.ಎಸ್ ಧೋನಿಯವರಿಂದ ನಾನು ನಾಯಕತ್ವದ ಗುಣಗಳನ್ನು ಕಲಿತಿರುವೆ ಎಂದಿರುವ ಕೊಹ್ಲಿ, ಸ್ಲಿಪ್’ನಲ್ಲಿ ಧೋನಿ ಸಮೀಪ ನಿಂತು ಅವರು ತೆಗೆದುಕೊಳ್ಳುವ ನಿರ್ಧಾರಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೆ ಎಂದು ಹೇಳಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.