ಟೆಸ್ಟ್ ಕ್ರಿಕೆಟ್'ನಲ್ಲಿ ಹೊಸ ದಾಖಲೆ ನಿರ್ಮಿಸಿದ ಕೊಹ್ಲಿ

Published : Feb 09, 2017, 07:51 AM ISTUpdated : Apr 11, 2018, 12:55 PM IST
ಟೆಸ್ಟ್ ಕ್ರಿಕೆಟ್'ನಲ್ಲಿ ಹೊಸ ದಾಖಲೆ ನಿರ್ಮಿಸಿದ ಕೊಹ್ಲಿ

ಸಾರಾಂಶ

ಆಸ್ಟ್ರೇಲಿಯಾ ವಿರುದ್ಧ 6,ನ್ಯೂಜಿಲ್ಯಾಂಡ್ ವಿರುದ್ಧ 3, ಇಂಗ್ಲೆಂಡ್ ವಿರುದ್ಧ 3, ಇನ್ನುಳಿದಂತೆ ಶ್ರೀಲಂಕಾ, ದಕ್ಷಿಣ ಆಫ್ರಿಕಾ, ವೆಸ್ಟ್ ಇಂಡೀಸ್ ಬಾಂಗ್ಲಾದೇಶದ ವಿರುದ್ಧ ತಲಾ ಒಂದೊಂದು ಶತಕ ಬಾರಿಸಿದ್ದಾರೆ.

ಹೈದರಾಬಾದ್(ಫೆ.09): ಈಗಾಗಲೇ ಹಲವು ದಾಖಲೆಗಳನ್ನು ನಿರ್ಮಿಸಿರುವ  ಭಾರತ ಕ್ರಿಕೆಟ್ ತಂಡದ ನಾಯಕ ಹಾಗೂ ಸ್ಫೋಟಕ ಬ್ಯಾಟ್ಸ್'ಮನ್ ವಿರಾಟ್ ಕೊಹ್ಲಿ ಮತ್ತೊಂದು ಹೊಸ ದಾಖಲೆ ನಿರ್ಮಿಸಿದ್ದಾರೆ. ತಾವು ಟೆಸ್ಟ್ ಆಡಿರುವ ಎಲ್ಲ ದೇಶಗಳ ವಿರುದ್ಧವೂ ಶತಕ ಬಾರಿಸಿದ್ದಾರೆ.

ವಿರಾಟ್ ಕೊಹ್ಲಿ ತಾವು ಟೆಸ್ಟ್ ಆಡಿರುವ 7 ದೇಶಗಳ ವಿರುದ್ಧ 16 ಶತಕ ಹೊಡೆದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ 6,ನ್ಯೂಜಿಲ್ಯಾಂಡ್ ವಿರುದ್ಧ 3, ಇಂಗ್ಲೆಂಡ್ ವಿರುದ್ಧ 3, ಇನ್ನುಳಿದಂತೆ ಶ್ರೀಲಂಕಾ, ದಕ್ಷಿಣ ಆಫ್ರಿಕಾ, ವೆಸ್ಟ್ ಇಂಡೀಸ್ ಬಾಂಗ್ಲಾದೇಶದ ವಿರುದ್ಧ ತಲಾ ಒಂದೊಂದು ಶತಕ ಬಾರಿಸಿದ್ದಾರೆ. ಟೆಸ್ಟ್ ಆಡುವ ಉಳಿದ ತಂಡಗಳಾದ ಪಾಕಿಸ್ತಾನ ಹಾಗೂ ಜಿಂಬಾಬ್ವೆ ವಿರುದ್ಧ ಒಂದು ಪಂದ್ಯವಾಡದ ಕಾರಣ ಆ ದೇಶಗಳ ವಿರುದ್ಧ ಶತಕ ಹೊಡೆದಿಲ್ಲ.   

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ind vs pak ಪಂದ್ಯದಲ್ಲಿ ಭಾವನಾತ್ಮಕ ಕ್ಷಣ: ಭಾರತದ ರಾಷ್ಟ್ರಗೀತೆ ಹಾಡಿದ ಪಾಕ್ ಅಭಿಮಾನಿ VIDEO
Ind Vs Pak: ನಿಮ್ಮ ವಯಸ್ಸೆಷ್ಟು? ಎಂದು ಕೇಳಿದ ಪಾಕಿಸ್ತಾನಿ ಫ್ಯಾನ್‌! ಭಾರತೀಯ ಅಜ್ಜಿ ಕೊಟ್ಟ ಖಡಕ್ ಉತ್ತರಕ್ಕೆ ಬಾಯಿ ಮುಚ್ಚಿಕೊಂಡ!