
ಕೋಲ್ಕತಾ(ಏ.08): ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿರುವ ಆರ್'ಸಿಬಿಗೆ ಮೊದಲ ಪಂದ್ಯದಲ್ಲೇ ಆಘಾತ ಎದುರಾಗಿದೆ. ಸುನಿಲ್ ನರೈನ್ ಹಾಗೂ ನಾಯಕ ದಿನೇಶ್ ಕಾರ್ತಿಕ್ ಸಮಯೋಚಿತ ಬ್ಯಾಟಿಂಗ್ ನೆರವಿನಿಂದ ಕೋಲ್ಕತಾ ನೈಟ್'ರೈಡರ್ಸ್ 4 ವಿಕೆಟ್'ಗಳ ಭರ್ಜರಿ ಜಯ ದಾಖಲಿಸಿದೆ.
ಕೋಲ್ಕತಾ ಆರಂಭಿಕ ಆಘಾತದ ಹೊರತಾಗಿಯೂ ಸುನಿಲ್ ನರೈನ್(19 ಎಸೆತ, 50) ಸಿಡಲಬ್ಬರದ ಬ್ಯಾಟಿಂಗ್ ಹಾಗೂ ಮಧ್ಯಮಕ್ರಮಾಂಕದಲ್ಲಿ ನಿತೀಶ್ ರಾಣಾ(34) ಹಾಗೂ ನಾಯಕ ಕಾರ್ತಿಕ್(35*) ಉಪಯುಕ್ತ ಬ್ಯಾಟಿಂಗ್ ನೆರವಿನಿಂದ ತವರು ನೆಲದಲ್ಲಿ ಶುಭಾರಂಭ ಮಾಡಿದೆ.
ಯುಜುವೇಂದ್ರ ಚಾಹಲ್ ಹಾಗೂ ವಾಷಿಂಗ್ಟನ್ ಸುಂದರ್ ದುಬಾರಿಯಾಗಿದ್ದು ಆರ್'ಸಿಬಿಗೆ ಹಿನ್ನಡೆಯಾಗಲು ಕಾರಣ. ಜತೆಗೆ ಆರಂಭದಲ್ಲೇ ನರೇನ್ ನಿಯಂತ್ರಿಸಲು ವಿಫಲವಾಗಿದ್ದು ಆರ್'ಸಿಬಿ ಪಾಲಿಗೆ ನುಂಗಲಾರದ ತುತ್ತಾಯಿತು.
ಇದಕ್ಕೂ ಮೊದಲು ಆರ್'ಸಿಬಿ 7 ವಿಕೆಟ್ ಕಳೆದುಕೊಂಡು 176 ರನ್ ಬಾರಿಸಿತ್ತು.
ಸಂಕ್ಷಿಪ್ತ ಸ್ಕೋರ್:
RCB: 176/7
ಎಬಿ ಡಿವಿಲಿಯರ್ಸ್: 44
ನಿತೀಶ್ ರಾಣಾ: 11/2
KKR: 177/6
ಸುನಿಲ್ ನರೈನ್: 50
ವೋಕ್ಸ್: 36/3
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.