
ಮೈಸೂರು(ಆ.28): ಶಿವಮೊಗ್ಗ ಲಯನ್ಸ್ ವಿರುದ್ದ ಕೆಪಿಎಲ್ ಲೀಗ್ ಪಂದ್ಯದಲ್ಲಿ ಮೈಸೂರು ವಾರಿಯರ್ಸ್ 6 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ 3 ಪಂದ್ಯದಿಂದ 2 ಗೆಲುವು ಸಾಧಿಸಿರುವ ಮೈಸೂರು ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಇಳಿದ ಶಿವಮೊಗ್ಗ ಲಯನ್ಸ್ ನಿಗಧಿತ 20 ಓವರ್‌ಗಳಲ್ಲಿ 146 ರನ್‌ಗಳಿಗೆ ಆಲೌಟ್ ಆಯಿತು. ಶರತ್ ಬಿಆರ್ 46 ಹಾಗೂ ಆದಿತ್ಯ ಸೋಮಣ್ಣ 39ರನ್‌ಗಳ ಕಾಣಿಕೆ ನೀಡಿದರು.
147 ರನ್ ಗುರಿ ಬೆನ್ನಟ್ಟಿದ ಮೈಸೂರು ವಾರಿಯರ್ಸ್ ತಂಡಕ್ಕೆ ರಾಜು ಭಟ್ಕಳ್ ಹಾಗೂ ಅರ್ಜುನ್ ಹೊಯ್ಸಳ ಉತ್ತಮ ಆರಂಭ ನೀಡಿದರು. ಅರ್ಜುನ್ 40 ಹಾಗೂ ರಾಜು ಭಟ್ಕಳ್ 59 ರನ್ ಕಾಣಿಕೆ ನೀಡಿದರು. ಶೋಯಿಬ್ ಮ್ಯಾನೇಜ್ ಅಜೇಯ 25ರನ್ ಸಿಡಿಸಿದರು. ಈ ಮೂಲಕ ಮೈಸೂರು 17.2 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು ಗುರಿ ತಲುಪಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.