
ಬೆಂಗಳೂರು(ಜು.31]: ಆಗಸ್ಟ್ 15 ರಿಂದ ಆರಂಭವಾಗಲಿರುವ ಕರ್ನಾಟಕ ಪ್ರೀಮಿಯರ್ ಲೀಗ್ (ಕೆಪಿಎಲ್) 7ನೇ ಆವೃತ್ತಿಯ ವೇಳಾಪಟ್ಟಿ ಸೋಮವಾರ ಪ್ರಕಟಗೊಂಡಿದೆ. ಕಳೆದ ಬಾರಿಯಂತೆ ಈ ಬಾರಿಯೂ ಬೆಂಗಳೂರು, ಹುಬ್ಬಳ್ಳಿ ಮತ್ತು ಮೈಸೂರಿನಲ್ಲಿ ಪಂದ್ಯಗಳನ್ನು ನಡೆಸಲು ನಿರ್ಧರಿಸಲಾಗಿದೆ.
ಇದನ್ನು ಓದಿ: ಕೆಪಿಎಲ್ ಹರಾಜಿನ ಬಳಿಕ 7 ತಂಡಗಳು ಹೇಗಿದೆ? ಇಲ್ಲಿದೆ ಸಂಪೂರ್ಣ ವಿವರ
ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೊದಲ 3 ಪಂದ್ಯಗಳು(ಆ.15-17) ನಡೆಯಲಿದ್ದು, ಮೊದಲ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ಹಾಗೂ ಬೆಳಗಾವಿ ಪ್ಯಾಂಥರ್ಸ್ ತಂಡಗಳು ಸೆಣಸಲಿವೆ.
2ನೇ ಚರಣ ಆ.19-26ರ ವರೆಗೂ ಹುಬ್ಬಳ್ಳಿಯಲ್ಲಿ ನಡೆದರೆ, ಆ.28-ಸೆ.6ರ ವರೆಗೂ ನಡೆಯಲಿರುವ ಅಂತಿಮ ಚರಣಕ್ಕೆ ಮೈಸೂರು ಆತಿಥ್ಯ ವಹಿಸಲಿದೆ. ಸೆ.3ಕ್ಕೆ ಲೀಗ್ ಹಂತ ಮುಕ್ತಾಯಗೊಳ್ಳಲಿದ್ದು, ಸೆ.4 ಹಾಗೂ ಸೆ.5ರಂದು ಸೆಮಿಫೈನಲ್ಸ್, ಸೆ.6ಕ್ಕೆ ಫೈನಲ್ ಪಂದ್ಯ ನಡೆಯಲಿದೆ.
ಇದನ್ನು ಓದಿ: ಗರಿಷ್ಠ ಮೊತ್ತಕ್ಕೆ ಹರಾಜಾದ ಅಭಿಮನ್ಯು ಮಿಥುನ್ ಕೆಪಿಎಲ್ ಆಡೋದು ಡೌಟ್
₹50ಕ್ಕೆ ಟಿಕೆಟ್ ಲಭ್ಯ:
ಬೆಂಗಳೂರಿನಲ್ಲಿ ನಡೆಯಲಿರುವ 3 ಪಂದ್ಯಗಳ ಟಿಕೆಟ್‌ಗಳು ಆನ್‌ಲೈನ್‌ನಲ್ಲಿ ಖರೀದಿಗೆ ಲಭ್ಯವಿದ್ದು, ಟಿಕೆಟ್ ದರ ₹50ರಿಂದ ₹1000 ವರೆಗೂ ಇದೆ. ಚಿನ್ನಸ್ವಾಮಿ ಕ್ರೀಡಾಂಗಣದ ಕೌಂಟರ್‌ನಲ್ಲೂ ಟಿಕೆಟ್ ಮಾರಾಟ ನಡೆಸಲಾಗುತ್ತದೆ ಎಂದು ಕೆಎಸ್‌ಸಿಎ ಕಾರ್ಯದರ್ಶಿ ಸುಧಾಕರ್ ರಾವ್ ತಿಳಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.