
ಹುಬ್ಬಳ್ಳಿ[ಆ.23]: ಕರ್ನಾಟಕ ಪ್ರೀಮಿಯರ್ ಲೀಗ್’ನ 7ನೇ ಆವೃತ್ತಿಯ ಸತತ 3 ಪಂದ್ಯಗಳು ರದ್ದಾಗಿವೆ. ಹೀಗಾಗಿ ಹುಬ್ಬಳ್ಳಿ ಎರಡನೇ ಚರಣದ ಕೆಪಿಎಲ್’ಗೆ ವರುಣ ಅಡ್ಡಿಪಡಿಸಿದ್ದರು, ಇಲ್ಲಿ ನಡೆಯಬೇಕಿದ್ದ ಪಂದ್ಯಗಳು ಮೈಸೂರಿಗೆ ಸ್ಥಳಾಂತರಗೊಂಡಿವೆ.
ಮಳೆ ಹಾಗೂ ಮೈದಾನ ಒದ್ದೆಯಾಗಿದ್ದ ಕಾರಣ, ಬುಧವಾರ ನಡೆಯಬೇಕಿದ್ದ ಹುಬ್ಬಳ್ಳಿ ಟೈಗರ್ಸ್ ಹಾಗೂ ಬಳ್ಳಾರಿ ಟಸ್ಕರ್ಸ್, ಬೆಂಗಳೂರು ಬ್ಲಾಸ್ಟರ್ಸ್ ಹಾಗೂ ಬಿಜಾಪುರ ಬುಲ್ಸ್ ನಡುವಿನ ಪಂದ್ಯಗಳು ಟಾಸ್ ಸಹ ಕಾಣದೆ ರದ್ದಾಗಿದ್ದವು. ಇದೀಗ ಹುಬ್ಬಳ್ಳಿ ಚರಣದ ಪಂದ್ಯಗಳು ಆಗಸ್ಟ್ 25ರಿಂದ ಮೈಸೂರಿನಲ್ಲಿ ಜರುಗಲಿವೆ.
ಇದನ್ನು ಓದಿ: ಇಲ್ಲಿದೆ ಕೆಪಿಎಲ್ ಕ್ರಿಕೆಟ್ ಟೂರ್ನಿಯ ಸಂಪೂರ್ಣ ವೇಳಾಪಟ್ಟಿ
ಆಗಸ್ಟ್ 25ರಂದು ಬೆಳಗಾವಿ ಪ್ಯಾಂಥರ್ಸ್ ಹಾಗೂ ಬಳ್ಳಾರಿ ಟಸ್ಕರ್ಸ್ ತಂಡಗಳು ಮುಖಾಮುಖಿಯಾಗಲಿವೆ. ಅದೇ ದಿನ ಶಿವಮೊಗ್ಗ ಲಯನ್ಸ್ ಹಾಗೂ ಬೆಂಗಳೂರು ಬ್ಲಾಸ್ಟರ್ಸ್ ನಡುವಿನ ಪಂದ್ಯ ಕೂಡಾ ಜರುಗಲಿದೆ. ಇನ್ನು ಆಗಸ್ಟ್ 26ರಂದು ಬಿಜಾಪುರ ಬುಲ್ಸ್ ಹಾಗೂ ಬಳ್ಳಾರಿ ಟಸ್ಕರ್ಸ್ ತಂಡಗಳು ಸೆಣಸಲಿವೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.