
ಬೆಂಗಳೂರು(ಆ.23): ಕೆಪಿಎಲ್ 8ನೇ ಆವೃತ್ತಿಯಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ಮೊದಲ ಗೆಲುವು ದಾಖಲಿಸಿದೆ. ಮಳೆ ಅಡ್ಡಿಪಡಿಸಿದ ಪಂದ್ಯದಲ್ಲಿ ಮಾಜಿ ಚಾಂಪಿಯನ್ ಬಳ್ಳಾರಿ ಟಸ್ಕರ್ಸ್ ವಿರುದ್ಧ ವಿಜೆಡಿ ನಿಯಮದಡಿ 1 ರನ್ ರೋಚಕ ಜಯ ಪಡೆಯಿತು.
KPL 2019: ಬಳ್ಳಾರಿ ಟಸ್ಕರ್ಸ್‌ಗೆ ಶರಣಾದ ಹುಬ್ಳಿ ಟೈಗರ್ಸ್
ಗುರುವಾರ ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬೆಂಗಳೂರು 16 ಓವರಲ್ಲಿ 8 ವಿಕೆಟ್‌ಗೆ 93 ರನ್ ಗಳಿಸಿತು. 12 ಓವರ್‌ಗಳಲ್ಲಿ 4 ವಿಕೆಟ್‌ಗೆ 63 ರನ್ ಗಳಿಸಿದ್ದಾಗ ಮಳೆ ಸುರಿದ ಕಾರಣ ಪಂದ್ಯವನ್ನು 16 ಓವರ್‌ಗೆ ಸೀಮಿತಗೊಳಿಸಲಾಯಿತು.
ಮಳೆಯಿಂದಾಗಿ KPL ಟೂರ್ನಿಯಲ್ಲಿ ಬದಲಾವಣೆ; ಹೊಸ ವೇಳಾಪಟ್ಟಿ ಪ್ರಕಟ!
94 ರನ್‌ಗಳ ಗುರಿ ಬೆನ್ನತ್ತಿದ ಬಳ್ಳಾರಿ ಟಸ್ಕರ್ಸ್ 8.2 ಓವರಲ್ಲಿ 5 ವಿಕೆಟ್‌ಗೆ 55 ರನ್ ಗಳಿಸಿತ್ತು. ಈ ವೇಳೆ ಮತ್ತೆ ಮಳೆ ಸುರಿದ ಕಾರಣ, ಫಲಿತಾಂಶಕ್ಕಾಗಿ ವಿಜೆಡಿ ನಿಯಮದ ಮೊರೆ ಹೋಗಲಾಯಿತು. ಈ ಹಂತದಲ್ಲಿ ಬಳ್ಳಾರಿ ಒಂದು ರನ್ ಹಿಂದಿದ್ದ ಕಾರಣ, ಬೆಂಗಳೂರಿಗೆ ಗೆಲುವು ಒಲಿಯಿತು.
ಸ್ಕೋರ್:
ಬೆಂಗಳೂರು ಬ್ಲಾಸ್ಟರ್ಸ್ 93/8 (ರೋಹನ್ 22, ಕಾಜಿ 3-15)
ಬಳ್ಳಾರಿ ಟಸ್ಕರ್ಸ್ 55/5 (ಅಭಿಷೇಕ್ 30, ಭರತ್ 2-9)
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.