
ಬೆಂಗಳೂರು(ಆ.16): ಕರ್ನಾಟಕ ಪ್ರಿಮಿಯರ್ ಲೀಗ್ ಟೂರ್ನಿ ವರ್ಣರಂಜಿತ ಉದ್ಘಾಟನಾ ಸಮಾರಂಭದ ಮೂಲಕ ಚಾಲನೆ ಸಿಕ್ಕಿದೆ. ಒಪನಿಂಗ್ ಸೆರೆಮನಿ ಬಳಿಕ ಬೆಂಗಳೂರು ಬ್ಲಾಸ್ಟರ್ಸ್ ಹಾಗೂ ಮೈಸೂರ್ ವಾರಿಯರ್ಸ್ ಹೋರಾಟ ನಡೆಸಿತು. ಆದರೆ ಮೊದಲ ಪಂದ್ಯವೇ ಮಳೆಗೆ ಆಹುತಿಯಾಗಿದೆ. ಈ ಮೂಲಕ ಬೆಂಗಳೂರು ಹಾಗೂ ಮೈಸೂರು ಒಂದೊಂದು ಅಂಕ ಹಂಚಿಕೊಂಡಿದೆ.
ಟಾಸ್ ಸೋತು ಬ್ಯಾಟಿಂಗ್ ಇಳಿದ ಬೆಂಗಳೂರು ಬ್ಲಾಸ್ಟರ್ಸ್ ತಂಡಕ್ಕೆ ಜೆ ಸುಚಿತ್ ಶಾಕ್ ನೀಡಿದರು. ಸುಚಿತ್ ಸ್ಪಿನ್ ದಾಳಿಗೆ ತತ್ತರಿಸಿದ ಬೆಂಗಳೂರು ಆರಂಭದಲ್ಲೇ ಶರತ್ ಬಿಆರ್ ವಿಕೆಟ್ ಕಳೆದುಕೊಂಡಿತು. ರೋಹನ್ ಕದಮ್ 23 ರನ್ ಸಿಡಿಸಿ ಔಟಾದರು. ಬೆಂಗಳೂರು 40 ರನ್‌ಗೆ 2 ವಿಕೆಟ್ ಕಳೆದುಕೊಂಡಿತು.
ನಾಯಕ ರಾಂಗ್ಸೆನ್ ಜೊನಾಥನ್ 17 ರನ್ ಸಿಡಿಸಿ ಔಟಾದರು. ಆದರೆ ನಿಕಿನ್ ಜೊಸ್ ತಂಡಕ್ಕೆ ಆಸರೆಯಾದರು. ಜೋಸ್ ಅಜೇಯ 28 ರನ್ ಸಿಡಿಸಿದರು. ಬೆಂಗಳೂರು 13 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 88 ರನ್ ಸಿಡಿಸಿತು. ಅಷ್ಟರಲ್ಲೇ ಸುರಿದ ಮಳೆಯಿಂದ ಪಂದ್ಯ ತಾತ್ಕಾಲಿಕ ಸ್ಥಗಿತಗೊಂಡಿತು. ಆದರೆ ಪಂದ್ಯ ಪುನರ್ ಆರಂಭಕ್ಕೆ ಮಳೆ ಅನುವು ಮಾಡಿಕೊಡಲಿಲ್ಲ. ಹೀಗಾಗಿ ಪಂದ್ಯವನ್ನು ರದ್ದುಮಾಡಲಾಯಿತು. 2019ರ ಕೆಪಿಎಲ್ ಟೂರ್ನಿಯ ಮೊದಲ ಪಂದ್ಯವೇ ಮಳೆಗೆ ಆಹುತಿಯಾದ ಕಾರಣ ಅಭಿಮಾನಿಗಳಿಗೆ ನಿರಾಸೆಯಾಯಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.