
"
ಮೈಸೂರು(ಆ.30): ಕರ್ನಾಟಕ ಪ್ರೀಮಿಯರ್ ಲೀಗ್ 8ನೇ ಆವೃತ್ತಿಯ ಎಲಿಮಿನೇಟರ್ ಪಂದ್ಯದಲ್ಲಿ ಹುಬ್ಬಳ್ಳಿ ಟೈಗರ್ಸ್, ಶಿವಮೊಗ್ಗ ಲಯನ್ಸ್ ವಿರುದ್ಧ 20 ರನ್‌ಗಳ ಅಂತರದಲ್ಲಿ ಗೆಲುವು ಸಾಧಿಸುವ ಮೂಲಕ 2ನೇ ಕ್ವಾಲಿಫೈಯರ್ ಹಂತಕ್ಕೇರಿದೆ. ಸೋತ ಶಿವಮೊಗ್ಗ ಹೊರಬಿದ್ದಿದೆ.
KPL 2019: ಫೈನಲ್‌ಗೆ ಲಗ್ಗೆಯಿಟ್ಟ ಬಳ್ಳಾರಿ ಟಸ್ಕರ್ಸ್
ಶುಕ್ರವಾರ ನಡೆಯಲಿರುವ 2ನೇ ಕ್ವಾಲಿಫೈಯರ್‌ನಲ್ಲಿ ಹುಬ್ಬಳ್ಳಿ, ಬೆಳಗಾವಿ ವಿರುದ್ಧ ಸೆಣಸಲಿದೆ. ಇಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಹುಬ್ಬಳ್ಳಿ ನೀಡಿದ 191 ರನ್‌ಗಳ ಬೃಹತ್ ಸವಾಲನ್ನು ಬೆನ್ನತ್ತಿದ ಶಿವಮೊಗ್ಗ ಕೇವಲ 15 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡಿತು. ಪವನ್ (38), ಮಿಥುನ್ (40) ಹೊರತಾಗಿಯೂ ಶಿವಮೊಗ್ಗ 19.3 ಓವರಲ್ಲಿ 170ಕ್ಕೆ ಆಲೌಟ್ ಆಯಿತು. ಇದಕ್ಕೂ ಮುನ್ನ ಹುಬ್ಬಳ್ಳಿ ವಿನಯ್ (55), ಕೆ.ಬಿ. ಪವನ್ (56) ರನ್ ನೆರವಿನಿಂದ 5 ವಿಕೆಟ್‌ಗೆ 190 ರನ್ ಗಳಿಸಿತು.
ಬೆಂಗಳೂರು ಮಣಿಸಿ ಪ್ಲೇ ಆಫ್‌ಗೆ ಲಗ್ಗೆ ಇಟ್ಟ ಹುಬ್ಳಿ ಟೈಗರ್ಸ್!
ಈಗಾಗಲೇ ಬಳ್ಳಾರಿ ಟಸ್ಕರ್ಸ್ ತಂಡವು ಫೈನಲ್ ಪ್ರವೇಶಿಸಿದ್ದು, ಆಗಸ್ಟ್ 31ರಂದು ಫೈನಲ್ ಪಂದ್ಯ ನಡೆಯಲಿದೆ.
ಸ್ಕೋರ್:
ಹುಬ್ಬಳ್ಳಿ 190/5
ಶಿವಮೊಗ್ಗ 170/10
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.