
"
ಬೆಂಗಳೂರು(ಅ.03): ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟರ ರಾಜ್ಯ ಕ್ರಿಕೆಟ್ ಸಂಸ್ಥೆಯ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ಮಾಜಿ ಕ್ರಿಕೆಟಿಗ ರೋಜರ್ ಬಿನ್ನಿ ಬಣ ಭರ್ಜರಿ ಗೆಲುವು ಸಾಧಿಸಿದ್ದು, ಆಡಳಿತ ಚುಕ್ಕಾಣಿ ಹಿಡಿದಿದೆ. ಮಾಜಿ ಕಾರ್ಯದರ್ಶಿ ಬ್ರಿಜೇಶ್ ಪಟೇಲ್ ಬೆಂಬಲಿತ ಬಣವಾಗಿರಿ ಬಿನ್ನಿ ತಂಡ, ಎದುರಾಳಿ ಎಂಎಂ. ಹರೀಶ್ ಬಣ ಸೋಲಿಸಿ ಗೆಲುವು ಸಾಧಿಸಿತು.
ಇದನ್ನೂ ಓದಿ: ಕರ್ನಾಟಕ ಪ್ರವಾಹ ಸಂತ್ರಸ್ತರಿಗೆ ನೆರವು; ಅಭಿಯಾನದಲ್ಲಿ ಕೊಹ್ಲಿ, ಶಾಸ್ತ್ರಿ!
2013ರಲ್ಲಿ ಕೊನೆಯದಾಗಿ ಕರ್ನಾಟಕ ಕ್ರಿಕೆಟ್ ಸಂಸ್ಥೆಯಲ್ಲಿ ಚುನಾವಣೆ ನಡೆದಿತ್ತು. ಬಳಿಕ ಲೋಧ ಶಿಫಾರಸು ಬಳಿಕ ನಡೆದ ಮೊದಲ ಚುನಾವಣೆ ಇದಾಗಿದ್ದು, 1983ರ ವಿಶ್ವಕಪ್ ವಿಜೇಯ ತಂಡದ ಸದಸ್ಯ ರೋಜರ್ ಬಿನ್ನಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಬಿನ್ನಿ 943 ಮತ ಪಡೆದರೆ, ಹರೀಶ್ 111 ಮತ ಪಡೆದು ಸೋಲೊಪ್ಪಿಕೊಂಡಿದ್ದಾರೆ.
KSCA ಉಪಾಧ್ಯಕ್ಷ ಸ್ಥಾನಕ್ಕೆ ಬ್ರಿಜೇಶ್ ಪಟೇಲ್ ಬಣದ ಜೆ ಅಭಿರಾಮ್ 885 ಮತಗಳಿಂದ ಗೆಲುವು ಸಾಧಿಸಿದ್ದಾರೆ. ಕಾರ್ಯದರ್ಶಿ ಸ್ಥಾನಕ್ಕೆ ಸ್ಪರ್ಧಿಸಿದ್ದ ಸಂತೋಶ್ ಮೆನನ್ 810 ಮತಗಳಿಂದ ಗೆಲುವು ಸಾಧಿಸಿದ್ದಾರೆ. ಜಂಟಿ ಕಾರ್ಯದರ್ಶಿಯಾಗಿ ಶಾರ್ವಿರ್ ತಾರಾಪೂರ್ 810 ಮತ ಪಡೆದು ಗೆಲುವಿನ ನಗೆ ಬೀರಿದ್ದಾರೆ.
KSCA ಮಾಧ್ಯಮ ವಕ್ತಾರರಾಗಿ ಜನಪ್ರಿಯವಾಗಿರುವ ವಿನಯ್ ಮೃತ್ಯುಂಜಯ್ 801 ಮತಗಳಿಸೋ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.