
ನವದೆಹಲಿ(ಫೆ.07): ಕಳೆದ ವಾರ ಬೆಂಗಳೂರಿನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೂರನೇ ಚುಟುಕು ಪಂದ್ಯದ ವೇಳೆ ಮೊಣಕಾಲು ನೋವಿಗೆ ತುತ್ತಾಗಿರುವ ಲೆಗ್'ಸ್ಪಿನ್ನರ್ ಅಮಿತ್ ಮಿಶ್ರಾ ಗುರುವಾರದಿಂದ ಆರಂಭವಾಗಲಿರುವ ಬಾಂಗ್ಲಾದೇಶ ವಿರುದ್ಧದ ಏಕೈಕ ಟೆಸ್ಟ್ ಪಂದ್ಯಕ್ಕೆ ಅಲಭ್ಯವಾಗಿದ್ದು, ಅವರ ಬದಲಿಗೆ ತಂಡದಲ್ಲಿ ಕುಲದೀಪ್ ಯಾದವ್ ಸ್ಥಾನ ಪಡೆದಿದ್ದಾರೆ.
22ರ ಹರೆಯದ ಕುಲದೀಪ್, 22 ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 18.94ರ ಸರಾಸರಿಯಲ್ಲಿ 81 ವಿಕೆಟ್ ಪಡೆದಿದ್ದಾರೆ. ಜತೆಗೆ ಈ ಸಾಲಿನ ರಣಜಿಯ 8 ಪಂದ್ಯಗಳಲ್ಲಿ ಅವರು 35 ವಿಕೆಟ್'ಗಳನ್ನು ಉರುಳಿಸಿದ್ದರು.
ಉತ್ತರ ಪ್ರದೇಶದ ಈ ಎಡಗೈ ಸ್ಪಿನ್ನರ್ ಇದೇ ಮೊದಲ ಬಾರಿಗೆ ಭಾರತದ ಪರ ಟೆಸ್ಟ್ ಪಂದ್ಯಕ್ಕೆ ಆಯ್ಕೆಯಾಗಿರುವುದು ವಿಶೇಷ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.