
ಬಾರ್ಬಡೋಸ್[ಜೂ.26]: ಶ್ರೀಲಂಕಾ ತಂಡದ ಅಗ್ರ ಕ್ರಮಾಂಕದ ಬ್ಯಾಟ್ಸ್’ಮನ್ ಕುಸಾಲ ಮೆಂಡಿಸ್ ವೆಸ್ಟ್’ಇಂಡಿಸ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ವೇಳೆ ತೀವ್ರವಾಗಿ ಗಾಯಗೊಂಡಿದ್ದರು. ಇದೀಗ ಪೆರೆರಾ ಸುಧಾರಿಸಿಕೊಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
27 ವರ್ಷದ ಕುಸಾಲ್ ಪೆರೆರಾ ಬಾರ್ಬಡೋಸ್’ನಲ್ಲಿ ನಡೆಯುತ್ತಿದ್ದ ಹಗಲು-ರಾತ್ರಿ ಟೆಸ್ಟ್ ಪಂದ್ಯದ ಅಂತಿಮ ದಿನ ಗೇಬ್ರಿಯಲ್ ಬಾರಿಸಿದ ಚೆಂಡನ್ನು ಕ್ಯಾಚ್ ಹಿಡಿಯುವ ಯತ್ನದಲ್ಲಿ ಆಯತಪ್ಪಿ ಬಿದ್ದು ತೀವ್ರವಾಗಿ ಗಾಯಮಾಡಿಕೊಂಡಿದ್ದರು. ಬಳಿಕ ಮೈದಾನಕ್ಕೆ ಆ್ಯಂಬುಲೆನ್ಸ್ ಕರೆಸಿ ಅವರನ್ನು ಆಸ್ಪತ್ರೆಗೆ ರವಾನಿಸಲಾಗಿತ್ತು.
ಇದೀಗ ಶ್ರೀಲಂಕಾ ಕ್ರಿಕೆಟ್ ಮಂಡಳಿ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪೆರೆರಾ ಆರೋಗ್ಯದ ಕುರಿತು ಮಾಹಿತಿ ಹೊರಹಾಕಿದ್ದು, ಚೇತರಿಸಿಕೊಂಡಿದ್ದಾರೆ ಎಂದು ಟ್ವೀಟ್ ಮಾಡಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.