ಆರ್'ಟಿಐ ವ್ಯಾಪ್ತಿಗೆ ಬಿಸಿಸಿಐ?

Published : Nov 02, 2016, 12:34 PM ISTUpdated : Apr 11, 2018, 12:59 PM IST
ಆರ್'ಟಿಐ ವ್ಯಾಪ್ತಿಗೆ ಬಿಸಿಸಿಐ?

ಸಾರಾಂಶ

‘‘ಬಿಸಿಸಿಐ ಕಾರ್ಯಚಟುವಟಿಕೆಗಳೆಲ್ಲವೂ ಸಾರ್ವಜನಿಕವಾಗಿದೆ ಎಂದು ಸರ್ವೋಚ್ಚ ನ್ಯಾಯಾಲಯ ಹೇಳಿದ್ದು, ಇದರ ಹಿನ್ನೆಲೆಯಲ್ಲಿ ಜಗತ್ತಿನ ಶ್ರೀಮಂತ ಕ್ರಿಕೆಟ್ ಮಂಡಳಿಯನ್ನು ಆರ್‌ಟಿಐ ವ್ಯಾಪ್ತಿಗೆ ಒಳಪಡಿಸುವ ಸಂಬಂಧದ ಕಾರ್ಯಸಾಧ್ಯತೆಯನ್ನು ಪರಿಶೀಲಿಸುತ್ತಿದ್ದೇವೆ’’  - ಕಾನೂನು ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಬಿ.ಎಸ್. ಚೌಹಾಣ್

ಮುಂಬೈ(ನ.02): ಮುಂದಿನ ದಿನಗಳಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯನ್ನು ಮಾಹಿತಿ ಹಕ್ಕು ಕಾಯಿದೆ (ಆರ್‌ಟಿಐ) ಅಡಿ ತರಬೇಕೆಂಬ ಕುರಿತಾದ ಹಲವರ ಒತ್ತಾಯವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಕಾನೂನು ಆಯೋಗ ಈ ಕುರಿತು ಗಂಭೀರ ಚಿಂತನೆ ನಡೆಸಿದೆ.

ಬಿಸಿಸಿಐ ಆಡಳಿತ ಸುಧಾರಣೆಗಾಗಿ ನ್ಯಾ. ಲೋಧಾ ಸಮಿತಿ ನೀಡಿರುವ ಪ್ರಮುಖ ಶಿಫಾರಸುಗಳ ಪೈಕಿ ಇದೂ ಕೂಡ ಒಂದಾಗಿದೆ. ಒಂದೊಮ್ಮೆ ಬಿಸಿಸಿಐ ಏನಾದರೂ ಆರ್‌ಟಿಐ ವ್ಯಾಪ್ತಿಗೆ ಬಂದದ್ದೇ ಆದಲ್ಲಿ ಇನ್ನು ಮುಂದೆ ಅದು ನಡೆಸುವ ರಹಸ್ಯ ಸಭೆಗಳಾಗಲೀ, ರಾಜಕೀಯ ವ್ಯಕ್ತಿಗಳನ್ನು ಪದಾಕಾರಿಗಳನ್ನಾಗಿ ಆರಿಸುವುದಾಗಲೀ, ನಿರ್ದಿಷ್ಟ ವ್ಯಕ್ತಿ ಇಲ್ಲವೇ ಸಂಸ್ಥೆ ಜತೆಗಿನ ಒಪ್ಪಂದವಾಗಲೀ ಹಾಗೂ ಆಟಗಾರರ ಆಯ್ಕೆ ಇತ್ಯಾದಿ ವಿಷಯಗಳು ಸಾರ್ವಜನಿಕವಾಗಲಿದೆ.

‘‘ಬಿಸಿಸಿಐ ಕಾರ್ಯಚಟುವಟಿಕೆಗಳೆಲ್ಲವೂ ಸಾರ್ವಜನಿಕವಾಗಿದೆ ಎಂದು ಸರ್ವೋಚ್ಚ ನ್ಯಾಯಾಲಯ ಹೇಳಿದ್ದು, ಇದರ ಹಿನ್ನೆಲೆಯಲ್ಲಿ ಜಗತ್ತಿನ ಶ್ರೀಮಂತ ಕ್ರಿಕೆಟ್ ಮಂಡಳಿಯನ್ನು ಆರ್‌ಟಿಐ ವ್ಯಾಪ್ತಿಗೆ ಒಳಪಡಿಸುವ ಸಂಬಂಧದ ಕಾರ್ಯಸಾಧ್ಯತೆಯನ್ನು ಪರಿಶೀಲಿಸುತ್ತಿದ್ದೇವೆ’’ ಎಂದು ಕಾನೂನು ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಬಿ.ಎಸ್. ಚೌಹಾಣ್ ಹೇಳಿದ್ದಾರೆ.

ಬಿಸಿಸಿಐ ಅನ್ನು ಆರ್‌ಟಿಐ ಕಾಯಿದೆಯಡಿ ತರುವುದು ಮತ್ತು ಬೆಟ್ಟಿಂಗ್ ಅನ್ನು ಕಾನೂನುಬದ್ಧಗೊಳಿಸಲು ಸಂಸತ್ತು ಮುಂದಾಗಬೇಕೆಂದು ಜುಲೈ 18ರ ತನ್ನ ತೀರ್ಪಿನಲ್ಲಿ ಸರ್ವೋಚ್ಚ ನ್ಯಾಯಾಲಯ ತಿಳಿಸಿರುವಂತೆ ಇವೆರಡಕ್ಕೂ ಸಾರ್ವಜನಿಕರ ಪ್ರತಿಕ್ರಿಯೆ ಏನು ಎಂಬುದನ್ನು ಪರಿಗಣಿಸುತ್ತೇವೆ. ಜನತೆಯ ಅಭಿಪ್ರಾಯ ಸಂಗ್ರಹವಾದ ಬಳಿಕ ಆಯೋಗವು ತಜ್ಞರು ಮತ್ತು ವಿವಿಧ ಕ್ರೀಡಾ ಕ್ಷೇತ್ರದ ಪ್ರಮುಖರನ್ನು ಸಂದರ್ಶಿಸಿ ಬಳಿಕ ಸರ್ಕಾರಕ್ಕೆ ಈ ಕುರಿತು ಶಿಫಾರಸು ಸಲ್ಲಿಸುತ್ತದೆ ಎಂದೂ ಚೌಹಾಣ್ ಹೇಳಿದ್ದಾರೆ

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

2026ರ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಎರಡು ಅಪರೂಪದಲ್ಲೇ ಅಪರೂಪದ ದಾಖಲೆ ಬರೆಯಲು ರೆಡಿಯಾದ ಟೀಂ ಇಂಡಿಯಾ!
ಕರ್ನಾಟಕದ ಅಭಿಮನ್ಯು ಮಿಥುನ್ ದಾಖಲೆ ಸರಿಗಟ್ಟಿದ ಬೌಲರ್‌, ಟಿ20ಯ ಒಂದೇ ಓವರ್‌ನಲ್ಲಿ ಐದು ವಿಕೆಟ್‌ ವಿಶ್ವದಾಖಲೆ!