
ಕೋಲ್ಕತ್ತಾ(ಜೂನ್.11): ಮೈದಾನದಲ್ಲಿ ಅಭ್ಯಾಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ಯುವ ಕ್ರಿಕೆಟಿಗ ಸಾವನ್ನಪ್ಪಿರುವ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ. ಕೋಲ್ಕತ್ತಾ ಕ್ರಿಕೆಟ್ ಅಕಾಡೆಮಿಯಲ್ಲಿ ಅಭ್ಯಾಸ ಮಾಡುತ್ತಿದ್ದ 21 ವರ್ಷದ ದೇಬಬ್ರತ ಪೌಲ್ ಸಿಡಿಲು ಬಡಿದು ಸ್ಥಳದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
ತಕ್ಷಣವೇ ದೇಬಬ್ರತಾ ಪೌಲ್‌ಗೆ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಆದರೆ ತುರ್ತು ಚಿಕಿತ್ಸೆಗೆ ಸ್ಪಂದಿಸಿದ ಕಾರಣ ಸಮೀಪದ ರಾಮಕೃಷ್ಣ ಮಿಷನ್ ಆಸ್ಪತ್ರೆಗೆ ದಾಖಲಿಸಿಲಾಗಿದೆ. ಅಷ್ಟರೊಳಗೆ ಯುವ ಕ್ರಿಕೆಟಿಗನ ಪ್ರಾಣ ಪಕ್ಷಿ ಹಾರಿಹೋಗಿದೆ.
ಮೇ ತಿಂಗಳಿನಲ್ಲಿ ಕೋಲ್ಕತ್ತಾ ಕ್ರಿಕೆಟ್ ಅಕಾಡೆಮಿಗೆ ಸೇರಿಕೊಂಡಿದ್ದ ದೇಬಬ್ರತ ಪೌಲ್, ಆಲ್‌ರೌಂಡರ್ ಕ್ರಿಕೆಟಿಗನಾಗಿ ಗುರುತಿಸಿಕೊಂಡಿದ್ದರು. ಎಂದಿನಂತೆ ವಾರ್ಮ್ ಅಪ್ ಬಳಿಕ ಇನ್ನೇನು ಕ್ರಿಕೆಟ್ ಪ್ರಾಕ್ಟೀಸ್ ಆರಂಭಿಸಬೇಕು ಅನ್ನುವಷ್ಟರಲ್ಲೇ ಈ ದುರ್ಘಟನೆ ನಡೆದಿದೆ ಎಂದು ಕೋಲ್ಕತ್ತಾ ಕ್ರಿಕೆಟ್ ಆಕಾಡೆಮಿ ಕಾರ್ಯದರ್ಶಿ ಅಬ್ದುಲ್ ಮಸೂದ್ ಹೇಳಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.