
ಬಾರ್ಸಿಲೋನಾ(ಡಿ.19): ಬಾರ್ಸಿಲೋನಾ ಎಫ್‌ಸಿಯ ಸ್ಟಾರ್ ಫುಟ್ಬಾಲ್ ಆಟಗಾರ ಲಯೋನೆಲ್ ಮೆಸ್ಸಿ, ಮಂಗಳವಾರ ದಾಖಲೆಯ 5ನೇ ಬಾರಿಗೆ ‘ಯೂರೋಪಿಯನ್ ಗೋಲ್ಡನ್ ಶೂ’ ಪ್ರಶಸ್ತಿ ಜಯಿಸಿದ್ದಾರೆ.
ಮೆಸ್ಸಿ, ಬಾರ್ಸಿಲೋನಾ ಪರ 68 ಪಂದ್ಯಗಳನ್ನಾಡಿದ್ದು, ಅದರಲ್ಲಿ 34 ಗೋಲುಗಳನ್ನು ದಾಖಲಿಸಿದ್ದಾರೆ. ಈ ಹಿಂದೆ ಮೆಸ್ಸಿ, 2009, 2011, 2012 ಮತ್ತು 2016ರಲ್ಲಿ ಪ್ರಶಸ್ತಿ ಜಯಿಸಿದ್ದರು. ಗೋಲ್ಡನ್ ಶೂ ರೇಸ್ ನಲ್ಲಿದ್ದ ಮೊಹಮದ್ ಸಲಾಹ್ ಮತ್ತು ಹ್ಯಾರಿಕೇನ್’ಗೆ ನಿರಾಸೆಯಾಗಿದೆ.
ರಿಯಲ್ ಮ್ಯಾಡ್ರಿಡ್‌ನ ಮಾಜಿ ಆಟಗಾರ ಕ್ರಿಸ್ಟಿಯಾನೋ ರೋನಾಲ್ಡೋ ಒಟ್ಟು 4 ಬಾರಿ ಪ್ರಶಸ್ತಿ ಪಡೆದಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.