
ಮುಂಬೈ(ಮಾ.04): ಲೋಧಾ ಸಮಿತಿ ಶಿಫಾರಸು ಮಾಡಿರುವ ಸುಧಾರಣೆಗಳನ್ನು ಬಿಸಿಸಿಐ ಮುಂದಿನ ನಾಲ್ಕೈದು ತಿಂಗಳಲ್ಲಿ ಸಂಪೂರ್ಣವಾಗಿ ಜಾರಿಗೆ ತರಲಿದೆ ಎಂದು ಸುಪ್ರೀಂ ಕೋರ್ಟ್'ನಿಂದ ನೂತನವಾಗಿ ಆಯ್ಕೆಯಾಗಿರುವ ಆಡಳಿತಾಧಿಕಾರಿ ವಿನೋದ್ ರೈ ಹೇಳಿದ್ದಾರೆ.
ನಾವು ಕೋರ್ಟ್ ಹೇಳಿದಂತೆ ಆದಷ್ಟು ಶೀಘ್ರದಲ್ಲಿಯೇ ಹೊಸ ವ್ಯವಸ್ಥೆಯನ್ನು ಜಾರಿಗೆ ತರಲಿದ್ದೇವೆ ಎಂದು ರೈ ನುಡಿದಿದ್ದಾರೆ.
ಲೋಧಾ ಸಮಿತಿ ಶಿಪಾರಸು ಅನುಷ್ಟಾನ ಮಾಡಲು ಮೀನಾಮೇಷ ಎಣಿಸಿದ ಬಿಸಿಸಿಐ ಮಂಡಳಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಯನ್ನು ವಜಾಮಾಡಿ ಸುಪ್ರೀಂ ಕೋರ್ಟ್ ಜನವರಿಯಲ್ಲಿ ನಾಲ್ವರು ಸದಸ್ಯರನ್ನೊಳಗೊಂಡ ಆಡಳಿತ ಮಂಡಳಿಯನ್ನು ರಚಿಸಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.