
ಲಂಡನ್[ಆ.25]: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಪತ್ನಿ ಅನುಷ್ಕಾ ಶರ್ಮಾ ಜೋಡಿ ಲಂಡನ್’ನಲ್ಲಿ ’ಬ್ಯೂಟಿಫುಲ್ ಬಾಯ್’ನನ್ನು ಭೇಟಿ ಮಾಡಿ ಫೋಸ್ ಕೊಟ್ಟಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಭಾವಚಿತ್ರವೊಂದನ್ನು ಹಂಚಿಕೊಂಡಿದ್ದು, ಈ ಬ್ಯೂಟಿಫುಲ್ ಬಾಯ್’ನನ್ನು ನೋಡಿ. ನಮ್ಮ ಜೊತೆ ಫೋಟೋ ತೆಗೆಸಿಕೊಳ್ಳುವ ವೇಳೆ ಈತನ ಆರೋಗ್ಯ ಸ್ವಲ್ಪ ಸರಿಯಿರಲಿಲ್ಲ ಎಂದು ಟ್ವೀಟ್ ಮಾಡಿದ್ದಾರೆ. ಈ ಭಾವಚಿತ್ರವೀಗ ವೈರಲ್ ಆಗುತ್ತಿದ್ದು, 87 ಸಾವಿರಕ್ಕೂ ಹೆಚ್ಚು ಮಂದಿ ಲೈಕ್ ಮಾಡಿದ್ದಾರೆ.
ಅನುಷ್ಕಾ ಶರ್ಮಾ ಇಂಗ್ಲೆಂಡ್’ನಲ್ಲಿ ವಿರಾಟ್ ಕೊಹ್ಲಿಗೆ ಸಾಥ್ ನೀಡುತ್ತಿದ್ದಾರೆ. ಟೀಂ ಇಂಡಿಯಾ ಪ್ರಸ್ತುತ ಇಂಗ್ಲೆಂಡ್ ವಿರುದ್ಧ 5 ಟೆಸ್ಟ್ ಪಂದ್ಯಗಳ ಸರಣಿ ಆಡುತ್ತಿದ್ದು, ವಿರಾಟ್ ಕೊಹ್ಲಿ ಇದುವರೆಗೂ 440 ರನ್ ಬಾರಿಸಿದ್ದು, ಇದುವರೆಗೆ ಗರಿಷ್ಠ ರನ್ ಬಾರಿಸಿದ ಆಟಗಾರರೆನಿಸಿದ್ದಾರೆ. ಈಗಾಗಲೇ ಟೆಸ್ಟ್ ಸರಣಿಯಲ್ಲಿ 1-2ರ ಹಿನ್ನಡೆಯಲ್ಲಿದ್ದು, ಆಗಸ್ಟ್ 30ರಿಂದ ಆರಂಭವಾಗಲಿರುವ ನಾಲ್ಕನೇ ಟೆಸ್ಟ್’ನಲ್ಲಿ ಕಮ್’ಬ್ಯಾಕ್ ಮಾಡುವ ವಿಶ್ವಾಸದಲ್ಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.