
ನವದೆಹಲಿ(ಫೆ.22): ಮಹೇಂದ್ರ ಸಿಂಗ್ ಧೋನಿ ಜತೆ ಮತ್ತೆ ಆಡಲು ಅವಕಾಶ ಲಭ್ಯವಾಗಿರುವುದು ಸಂತಸವನ್ನುಂಟು ಮಾಡಿದ್ದು, ಅವರ ಜತೆ ಆಡಲು ಕಾತುರನಾಗಿದ್ದೇನೆ ಎಂದು ಆಫ್'ಸ್ಪಿನ್ನರ್ ಹರ್ಭಜನ್ ಸಿಂಗ್ ತಿಳಿಸಿದ್ದಾರೆ.
2008ರ ಐಪಿಎಲ್'ನಿಂದಲೂ ಮುಂಬೈ ಇಂಡಿಯನ್ಸ್ ಪರ ಆಡುತ್ತಿದ್ದ ಭಜ್ಜಿ, ಈ ಬಾರಿ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್'ಕೆ) ಪಾಲಾಗಿದ್ದಾರೆ. ಭಜ್ಜಿ, ‘ವಿಶ್ವಕಪ್ ವೇಳೆ ನಾಯಕ ಧೋನಿ ಸೂಕ್ತ ಸಲಹೆಗಳನ್ನು ನೀಡಿದ್ದರು. ಇದೀಗ ಹಲವು ವರ್ಷಗಳ ಬಳಿಕ ಮತ್ತೆ ಧೋನಿ ನೇತೃತ್ವದಲ್ಲಿ ಮತ್ತೆ ಆಡುವ ಅವಕಾಶ ಲಭಿಸಿದೆ. ಸಿಎಸ್'ಕೆಯನ್ನು ಮತ್ತೆ ಚಾಂಪಿಯನ್ ಪಟ್ಟಕ್ಕೇರಿಸುವುದು ನಮ್ಮ ಗುರಿ’ ಎಂದಿದ್ದಾರೆ.
ಮುಂಬೈ ಇಂಡಿಯನ್ಸ್ ಮೂರು ಬಾರಿ ಚಾಂಪಿಯನ್ ಪಟ್ಟಕ್ಕೇರಿಸುವಲ್ಲಿ ಭಜ್ಜಿ ಪ್ರಮುಖ ಪಾತ್ರವಹಿಸಿದ್ದರು. ಹರ್ಭಜನ್ ಸಿಂಗ್ ನೇತೃತ್ವದಲ್ಲಿ 2011ರಲ್ಲಿ ಮುಂಬೈ ಇಂಡಿಯನ್ಸ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.