ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಸಂದರ್ಭದಲ್ಲಿ ಮೇಜರ್ ಧ್ಯಾನ್ ಚಂದ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ನುಡಿ ನಮನ ಅರ್ಪಿಸಿದ್ದಾರೆ. ಧ್ಯಾನ್ ಚಂದ್ ಅವರ ಸಾಧನೆಯನ್ನು ಮರೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ
ನವದೆಹಲಿ(ಆ.29): ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ ಚಂದ್ ಅವರ 115ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ತಮ್ಮ ನುಡಿ ನಮನಗಳನ್ನು ಅರ್ಪಿಸಿದ್ದಾರೆ. ಧ್ಯಾನ್ ಚಂದ್ ಅವರ ಹುಟ್ಟುಹಬ್ಬವನ್ನು ರಾಷ್ಟ್ರೀಯ ಕ್ರೀಡಾ ದಿನವನ್ನಾಗಿ ಆಚರಿಸಲಾಗುತ್ತಿದೆ.
ಪ್ರಧಾನ ಮಂತ್ರಿ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಾಕಿ ದಿಗ್ಗಜನ ಸಾಧನೆಯ ಗುಣಗಾನ ಮಾಡಿದ್ದು, ಧ್ಯಾನ್ ಚಂದ್ ಅವರು ಹಾಕಿ ಸ್ಟಿಕ್‌ನಲ್ಲಿ ಮಾಡುತ್ತಿದ್ದ ಮ್ಯಾಜಿಕ್‌ನ್ನು ಎಂದೆಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಕೊಂಡಾಡಿದ್ದಾರೆ.
is a day to celebrate the remarkable achievements of all those exemplary sportspersons who have represented India in various sports and made our nation proud. Their tenacity and determination are outstanding.
— Narendra Modi (@narendramodi)ಇದೇ ವೇಳೆ ಪ್ರಧಾನಿ ಮೋದಿ ವಿವಿಧ ಕ್ರೀಡೆಗಳಲ್ಲಿ ದೇಶವನ್ನು ಪ್ರತಿನಿಧಿಸಿ ಅಸಾಧಾರಣ ಪ್ರದರ್ಶನ ತೋರಿದ ಎಲ್ಲಾ ಕ್ರೀಡಾಪಟುಗಳಿಗೂ ರಾಷ್ಟ್ರೀಯ ಕ್ರೀಡಾದಿನಾಚರಣೆಯ ಶುಭ ಸಂದರ್ಭದಲ್ಲಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಮುಂದುವರೆದು ಪ್ರತಿಭಾನ್ವಿತ ಅಥ್ಲೀಟ್‌ಗಳ ಯಶಸ್ಸಿಗೆ ನೆರವಾದ ಅವರ ಕುಟುಂಬಗಳಿಗೆ, ಕೋಚ್ ಹಾಗೂ ಸಹಾಯಕ ಸಿಬ್ಬಂದಿಗಳಿಗೂ ಪ್ರಧಾನಿ ಮೋದಿ ಧನ್ಯವಾದ ಸಲ್ಲಿಸಿದ್ದಾರೆ.
ದ್ರೋಣಾಚಾರ‍್ಯ ಪ್ರಶಸ್ತಿ ಸ್ವೀಕರಿಸುವ ಮುನ್ನಾ ಕೊನೆಯುಸಿರೆಳೆದ ಅಥ್ಲೆಟಿಕ್ಸ್ ಕೋಚ್ ಪುರುಷೋತ್ತಮ್ ರೈ
Today, on , we pay tributes to Major Dhyan Chand, whose magic with the hockey stick can never be forgotten.
This is also a day to laud the outstanding support given by the families, coaches and support staff towards the success of our talented athletes.
ಭಾರತ ಸರ್ಕಾರ ದೇಶದ ಪ್ರತಿಭಾನ್ವಿತ ಆಟಗಾರರನ್ನು ಗುರುತಿಸಿ ಬೆಳೆಸುವ ಕೆಲಸವನ್ನು ಸತತವಾಗಿ ಮಾಡುತ್ತಲೇ ಬಂದಿದೆ. ಪ್ರತಿಯೊಬ್ಬರು ಕ್ರೀಡೆ ಹಾಗೂ ಫಿಟ್ನೆಸ್ ಅಭ್ಯಾಸಗಳನ್ನು ತಮ್ಮ ಜೀವನ ಕ್ರಮವನ್ನಾಗಿ ಅಳವಡಿಸಿಕೊಳ್ಳಬೇಕು. ಇದರಿಂದ ಸಾಕಷ್ಟು ಪ್ರಯೋಜನಗಳಿದ್ದು, ಆರೋಗ್ಯ ಹಾಗೂ ಸಂತೋಷದಿಂದ ಇರಬಹುದು ಎಂದು ದೇಶದ ಜನತಗೆ ಪ್ರಧಾನಿ ಮೋದಿ ಕರೆ ನೀಡಿದ್ದಾರೆ.
2012ರಿಂದ ಭಾರತ ಸರ್ಕಾರ ಮೇಜರ್ ಧ್ಯಾನ್ ಚಂದ್ ಅವರ ಹುಟ್ಟಿದ ದಿನವಾದ ಆಗಸ್ಟ್ 29ನ್ನು ರಾಷ್ಟ್ರೀಯ ಕ್ರೀಡಾ ದಿನವನ್ನಾಗಿ ಆಚರಿಸಲು ಆರಂಭಿಸಿದೆ. ಇಂದೇ ಕ್ರೀಡೆಯಲ್ಲಿ ಅಸಾಧಾರಣ ಪ್ರದರ್ಶನ ತೋರಿದ ಆಟಗಾರರಿಗೆ ಹಾಗೂ ಕೋಚ್‌ಗಳಿಗೆ ಖೇಲ್ ರತ್ನ, ಅರ್ಜುನಾ, ದ್ರೋಣಾಚಾರ್ಯ ಪ್ರಶಸ್ತಿಗಳನ್ನು ನೀಡಲಾಗುತ್ತದೆ.