
ಕೌಲಾಲಂಪುರ[ಜೂ.29]: ಗೋಲ್ಡ್ ಕೋಸ್ಟ್ ಕಾಮನ್‌ವೆಲ್ತ್ ಬೆಳ್ಳಿ ಪದಕ ವಿಜೇತರಾದ ಕಿದಾಂಬಿ ಶ್ರೀಕಾಂತ್ ಮತ್ತು ಪಿ.ವಿ. ಸಿಂಧು, ಇಲ್ಲಿ ನಡೆಯುತ್ತಿರುವ ಮಲೇಷ್ಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಕ್ವಾರ್ಟರ್ ಪೈನಲ್ ಪ್ರವೇಶಿಸಿದ್ದಾರೆ. ಕಾಮನ್‌ವೆಲ್ತ್ ಚಿನ್ನದ ಪದಕ ವಿಜೇತೆ ಸೈನಾ ನೆಹ್ವಾಲ್ ನಿರಾಸೆ ಅನುಭವಿಸಿದರು.
ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಗುರುವಾರ ನಡೆದ ಪ್ರಿಕ್ವಾರ್ಟರ್‌ನಲ್ಲಿ ಒಲಿಂಪಿಕ್ಸ್ ಮತ್ತು ವಿಶ್ವ ಚಾಂಪಿಯನ್ ಶಿಪ್‌ನ ಬೆಳ್ಳಿ ವಿಜೇತೆ ಸಿಂಧು, 2ನೇ ಸುತ್ತಿನಲ್ಲಿ ಮಲೇಷ್ಯಾದ ಯಿಂಗ್ ಲೀ ಅವರನ್ನು 21-08, 21-14 ನೇರ ಗೇಮ್ ಗಳಿಂದ ಮಣಿಸಿ ಕ್ವಾರ್ಟರ್‌ಗೆ ಪ್ರವೇಶಿಸಿದರು. ಸಿಂಧು ಕ್ವಾರ್ಟರ್‌ನಲ್ಲಿ ವಿಶ್ವದ ನಂ.1 ಶಟ್ಲರ್ ಸ್ಪೇನ್‌ನ ಕರೋಲಿನಾ ಮರೀನ್‌ರನ್ನು ಎದುರಿಸಲಿದ್ದಾರೆ.
ಇದಕ್ಕೂ ಮುನ್ನ ನಡೆದ ಮೊದಲ ಸುತ್ತಿನ ಪಂದ್ಯದಲ್ಲಿ ಸೈನಾ ನಿರಾಸೆ ಅನುಭವಿಸಿ ಟೂರ್ನಿಯಿಂದ ಹೊರ ನಡೆದರು. ಅವರು ವಿಶ್ವದ ನಂ.2 ಜಪಾನ್‌ನ ಅಕಾನೆ ಯಮಾಗುಚಿ ವಿರುದ್ಧ 15-21, 13-21 ಗೇಮ್‌ಗಳಿಂದ ಸೋಲುಂಡರು.
ಪುರುಷರ ಸಿಂಗಲ್ಸ್‌ನ 2ನೇ ಸುತ್ತಿನ ಪಂದ್ಯದಲ್ಲಿ ಶ್ರೀಕಾಂತ್, ಚೈನೀಸ್ ತೈಪೆಯ ವಾಂಗ್ ಜು ವೀ ವಿರುದ್ಧ 20-22, 12-21 ನೇರ ಗೇಮ್‌ಗಳಿಂದ ಗೆಲುವು ಸಾಧಿಸಿದರು. ಇಬ್ಬರೂ 3 ಬಾರಿ ಮುಖಾಮುಖಿಯಾಗಿದ್ದು, ಈ ಗೆಲುವಿನೊಂದಿಗೆ ಶ್ರೀಕಾಂತ್ ಹ್ಯಾಟ್ರಿಕ್ ಸಾಧನೆ ಮಾಡಿದರು. ಶ್ರೀಕಾಂತ್ ಕ್ವಾರ್ಟರ್‌ನಲ್ಲಿ ಫ್ರಾನ್ಸ್‌ನ ಬ್ರೈಸ್ ಲಿವರ್ಡೆಜ್ ಸವಾಲು ಎದುರಿಸಲಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.