ಭಾರತ ‘ಎ’ ತಂಡಕ್ಕೆ ಮನೀಶ್‌ ಪಾಂಡೆ ನಾಯಕ

Published : Aug 20, 2019, 01:39 PM IST
ಭಾರತ ‘ಎ’ ತಂಡಕ್ಕೆ ಮನೀಶ್‌ ಪಾಂಡೆ ನಾಯಕ

ಸಾರಾಂಶ

ದಕ್ಷಿಣ ಆಫ್ರಿಕಾ ’ಎ’ ವಿರುದ್ಧದ 5 ಪಂದ್ಯಗಳ ಸರಣಿಯ ಮೊದಲ 3 ಪಂದ್ಯಗಳಿಗೆ ಕನ್ನಡಿಗ ಮನೀಶ್ ಪಾಂಡೆಗೆ ಭಾರತ ’ಎ’ ತಂಡದ ನಾಯಕತ್ವ ಪಟ್ಟ ಕಟ್ಟಲಾಗಿದೆ. ಇನ್ನುಳಿದಂತೆ ಉಳಿದೆರಡು ಪಂದ್ಯಗಳಿಗೆ ಶ್ರೇಯಸ್ ಅಯ್ಯರ್ ತಂಡವನ್ನು ಮುನ್ನಡೆಸಲಿದ್ದಾರೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...

ಮುಂಬೈ[ಆ.20]: ದಕ್ಷಿಣ ಆಫ್ರಿಕಾ ‘ಎ’ ವಿರುದ್ಧದ 5 ಪಂದ್ಯಗಳ ಏಕದಿನ ಸರಣಿಗೆ ಭಾರತ ‘ಎ ’ತಂಡ ಪ್ರಕಟಗೊಂಡಿದ್ದು, ಮೊದಲ 3 ಪಂದ್ಯಗಳಿಗೆ ಕರ್ನಾಟಕದ ಮನೀಶ್‌ ಪಾಂಡೆ ನಾಯಕರಾಗಿ ಆಯ್ಕೆಯಾಗಿದ್ದಾರೆ. ಇನ್ನುಳಿದ 2 ಪಂದ್ಯಗಳಲ್ಲಿ ಶ್ರೇಯಸ್‌ ಅಯ್ಯರ್‌ ತಂಡವನ್ನು ಮುನ್ನಡೆಸಲಿದ್ದಾರೆ. 

ಭಾರತ ವಿರುದ್ಧದ ಸರಣಿಗೆ ಸೌತ್ ಆಫ್ರಿಕಾ ತಂಡ ಪ್ರಕಟ!

ಆಗಸ್ಟ್ 29ರಿಂದ ಸೆ.8ರ ವರೆಗೂ ತಿರುವನಂತಪುರದಲ್ಲಿ ಸರಣಿ ನಡೆಯಲಿದೆ. ಶುಭ್‌ಮನ್‌ ಗಿಲ್‌, ವಿಜಯ್‌ ಶಂಕರ್‌, ಅಕ್ಷರ್‌ ಪಟೇಲ್‌, ನಿತೀಶ್‌ ರಾಣಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಯಜುವೇಂದ್ರ ಚಹಲ್‌ ಮೊದಲ 3 ಪಂದ್ಯಗಳಲ್ಲಿ ಆಡಲಿದ್ದಾರೆ.

ಟೆಸ್ಟ್ ಶ್ರೇಯಾಂಕ: ನಂ.1 ಪಟ್ಟಕ್ಕೆ ಕೊಹ್ಲಿಗೆ ಸ್ಮಿತ್‌ ಪೈಪೋಟಿ!

ಸೆಪ್ಟೆಂಬರ್ 15ರಿಂದ ಅಕ್ಟೋಬರ್ 23ರ ವರೆಗೆ ದಕ್ಷಿಣ ಆಫ್ರಿಕಾ ತಂಡವು ಭಾರತ ಪ್ರವಾಸ ಕೈಗೊಳ್ಳಲಿದ್ದು, ಈ ವೇಳೆ 3 ಟಿ20 ಹಾಗೂ 3 ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ. 
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Lionel Messi India visit: ರಾಹುಲ್ ಗಾಂಧಿಗೆ ಟಿ-ಶರ್ಟ್ ಉಡುಗೊರೆ ನೀಡಿದ ಮೆಸ್ಸಿ!
ಮುಂಬೈಗೆ ಬಂದಿಳಿದ ವಿರುಷ್ಕಾ ದಂಪತಿ; ಮೆಸ್ಸಿಯನ್ನು ಭೇಟಿಯಾಗ್ತಾರಾ ವಿರಾಟ್ ಕೊಹ್ಲಿ?