
ಜೈಪುರ[ಏ.27]: ಕನ್ನಡಿಗ ಮನೀಶ್ ಪಾಂಡೆ[61] ಆಕರ್ಷಕ ಅರ್ಧಶತಕದ ನೆರವಿನಿಂದ ಸನ್’ರೈಸರ್ಸ್ ಹೈದರಾಬಾದ್ ತಂಡವು 160 ರನ್ ಬಾರಿಸಿದ್ದು, ಆತಿಥೇಯ ರಾಜಸ್ಥಾನ ರಾಯಲ್ಸ್ ತಂಡಕ್ಕೆ ಸ್ಫರ್ಧಾತ್ಮಕ ಗುರಿ ನೀಡಿದೆ.
ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಸನ್’ರೈಸರ್ಸ್ ಹೈದರಾಬಾದ್ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. ನಾಯಕ ಕೇನ್ ವಿಲಿಯಮ್ಸನ್ ಕೇವಲ 13 ರನ್ ಬಾರಿಸಿ ಕನ್ನಡಿಗ ಶ್ರೇಯಸ್ ಗೋಪಾಲ್’ಗೆ ವಿಕೆಟ್ ಒಪ್ಪಿಸಿದರು. ಆ ಬಳಿಕ ವಾರ್ನರ್ ಕೂಡಿಕೊಂಡ ಮತ್ತೋರ್ವ ಕನ್ನಡಿಗ ಮನೀಶ್ ಪಾಂಡೆ ಆಕರ್ಷಕ ಇನ್ನಿಂಗ್ಸ್ ಕಟ್ಟಿದರು. ಎರಡನೇ ವಿಕೆಟ್’ಗೆ ಈ ಜೋಡಿ 75 ರನ್’ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಎಚ್ಚರಿಕೆ ಆಟವಾಡಿದ ವಾರ್ನರ್ 32 ಎಸೆತಗಳಲ್ಲಿ ಒಂದೂ ಬೌಂಡರಿ ಬಾರಿಸದೆಯೇ 37 ರನ್ ಗಳಿಸಿ ಓಶಾನೆ ಥಾಮಸ್’ಗೆ ವಿಕೆಟ್ ಒಪ್ಪಿಸಿದರು. ಒಂದು ಕಡೆ ವಿಕೆಟ್ ಬೀಳುತ್ತಿದ್ದರೂ ಮತ್ತೊಂದೆಡೆ ಸ್ಫೋಟಕ ಬ್ಯಾಟಿಂಗ್ ನಡೆಸಿದ ಮನೀಶ್ ಪಾಂಡೆ ಕೇವಲ 36 ಎಸೆತಗಳಲ್ಲಿ 9 ಬೌಂಡರಿ ಸಹಿತ 61 ರನ್ ಸಿಡಿಸಿದರು.
ನಾಟಕೀಯ ಕುಸಿತ: ಒಂದು ಹಂತದಲ್ಲಿ 120 ರನ್’ಗಳಿಗೆ 2 ವಿಕೆಟ್ ಕಳೆದುಕೊಂಡಿದ್ದ ಸನ್’ರೈಸರ್ಸ್ ಮನೀಶ್ ಪಾಂಡೆ ವಿಕೆಟ್ ಕಳೆದುಕೊಳ್ಳುತ್ತಿದ್ದಂತೆ ನಾಟಕೀಯ ಕುಸಿತ ಕಂಡಿತು. ಆ ಬಳಿಕ 26 ರನ್ ಗಳಿಸುವಷ್ಟರಲ್ಲಿ 6 ವಿಕೆಟ್ ಕಳೆದುಕೊಂಡಿತು. ಕೆಳ ಕ್ರಮಾಂಕದಲ್ಲಿ ರಶೀದ್ ಖಾನ್[17] ಹೊರತು ಪಡಿಸಿ ಉಳಿದ್ಯಾವ ಬ್ಯಾಟ್ಸ್’ಮನ್’ಗಳು ಎರಡಂಕಿ ಮೊತ್ತ ತಲುಪಲು ಸಫಲರಾಗಲಿಲ್ಲ.
ರಾಜಸ್ಥಾನ ರಾಯಲ್ಸ್ ಪರ ವರೂನ್ ಆ್ಯರೋನ್, ಓಶಾನ್ ಥಾಮಸ್, ಶ್ರೇಯಸ್ ಗೋಪಾಲ್ ಹಾಗೂ ಜಯದೇವ್ ಉನಾದ್ಕತ್ ತಲಾ 2 ವಿಕೆಟ್ ಪಡೆದರು.
ಸಂಕ್ಷಿಪ್ತ ಸ್ಕೋರ್
ಸನ್’ರೈಸರ್ಸ್ ಹೈದರಾಬಾದ್: 160/8
ಮನೀಶ್ ಪಾಂಡೆ: 61
ಜಯದೇವ್ ಉನಾದ್ಕತ್: 26/2
[* ವಿವರ ಅಪೂರ್ಣ]
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.