ಬಹುನಿರೀಕ್ಷಿತ 8ನೇ ಆವೃತ್ತಿಯ ಕರ್ನಾಟಕ ಪ್ರೀಮಿಯರ್ ಲೀಗ್ ಟೂರ್ನಿಗೆ ಇನ್ನೊಂದು ವಾರ ಬಾಕಿ ಇರುವಾಗಲೇ ಹುಬ್ಬಳ್ಳಿಯಲ್ಲಿ ನಡೆಯಬೇಕಿದ್ದ ಪಂದ್ಯಗಳು ತಾಂತ್ರಿಕ ಕಾರಣಗಳಿಂದ ಬೆಂಗಳೂರು ಹಾಗೂ ಮೈಸೂರಿಗೆ ಸ್ಥಳಾಂತರಗೊಂಡಿವೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ....
ಬೆಂಗಳೂರು(ಆ.08): ಉತ್ತರ ಕರ್ನಾಟಕ ಭಾಗದಲ್ಲಿ ಹವಾಮಾನ ವೈಪರಿತ್ಯದಿಂದಾಗಿ ಆಗಸ್ಟ್ 21 ರಿಂದ 25 ರವರೆಗೆ ಹುಬ್ಬಳ್ಳಿಯಲ್ಲಿ ನಡೆಯಬೇಕಿದ್ದ ಕೆಪಿಎಲ್ 8ನೇ ಆವೃತ್ತಿಯ ಪಂದ್ಯಗಳನ್ನು ಬೆಂಗಳೂರು ಹಾಗೂ ಮೈಸೂರಿಗೆ ಸ್ಥಳಾಂತರಿಸಲು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ನಿರ್ಧರಿಸಿದೆ.
KPL 2019: ಇಲ್ಲಿದೆ ಆಟಗಾರರ ಹರಾಜಿನ ಸಂಪೂರ್ಣ ಲಿಸ್ಟ್ !
undefined
ಆಗಸ್ಟ್ 16ರಿಂದ ಕೆಪಿಎಲ್ ಟೂರ್ನಿ ಆರಂಭವಾಗಲಿದ್ದು, ಈ ಮೊದಲಿನ ವೇಳಾಪಟ್ಟಿ ಬೆಂಗಳೂರಿನಲ್ಲೇ ಉದ್ಘಾಟನಾ ಪಂದ್ಯ ನಡೆಯಲಿದೆ. ಫೈನಲ್ ಪಂದ್ಯಕ್ಕೆ ಮೈಸೂರು ಆತಿಥ್ಯ ವಹಿಸಲಿದೆ. ಕಳೆದ ವರ್ಷವೂ ಕೂಡ KPL ಪಂದ್ಯಗಳು ಹುಬ್ಬಳ್ಳಿಯಿಂದ ಮೈಸೂರಿಗೆ ಸ್ಥಳಾಂತರಗೊಂಡಿದ್ದವು.
ಹಿಂದಿನ ವೇಳಾಪಟ್ಟಿ:
ಪರಿಷ್ಕೃತ ವೇಳಾಪಟ್ಟಿಯನ್ನು ಶೀಘ್ರ ಪ್ರಕಟ ಮಾಡುವುದಾಗಿ ಕೆಎಸ್‌ಸಿಎ ವಕ್ತಾರ ವಿನಯ್ ಮೃತ್ಯುಂಜಯ ತಿಳಿಸಿದ್ದಾರೆ. ಹೊಸ ವೇಳಾಪಟ್ಟಿ ತಿಳಿಯಲು ಕ್ರಿಕೆಟ್ ಅಭಿಮಾನಿಗಳೀಗ ತುದಿಗಾಲಿನಲ್ಲಿ ನಿಂತಿದ್ದಾರೆ.