
ಕೊಲಂಬೋ(ಜು.12): ದುರ್ಬಲ ಶ್ರೀಲಂಕಾ ವಿರುದ್ಧ ತವರಿನಲ್ಲೇ 3-2 ಅಂತರದಲ್ಲಿ ಏಕದಿನ ಸರಣಿ ಸೋತ ಬೆನ್ನಲ್ಲೇ ಸೋಲಿನ ನೈತಿಕ ಹೊಣೆಹೊತ್ತು ಆ್ಯಜಂಲೋ ಮ್ಯಾಥ್ಯೂಸ್ ಮೂರು ಮಾದರಿಯ ನಾಯಕತ್ವಕ್ಕೂ ಗುಡ್'ಬೈ ಹೇಳಿದ್ದಾರೆ.
ಈ ಸೋಲು ನನ್ನ ವೃತ್ತಿ ಜೀವನದಲ್ಲೇ ಅತ್ಯಂತ ಕೆಟ್ಟ ಹಂತ ಎಂದು ಪ್ರತಿಕ್ರಿಯಿಸಿದ್ದ ಮ್ಯಾಥ್ಯೂಸ್, ಶ್ರೀಲಂಕಾ ಕ್ರಿಕೆಟ್ ಮಂಡಳಿಯೊಂದಿಗೆ ಚರ್ಚಿಸಿ ಮಂಗಳವಾರ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.
2013ರಲ್ಲಿ ನಾಯಕತ್ವ ವಹಿಸಿಕೊಂಡಿದ್ದ ಮ್ಯಾಥ್ಯೂಸ್, 34 ಟೆಸ್ಟ್, 98 ಏಕದಿನ ಹಾಗೂ 12 ಟಿ20 ಪಂದ್ಯಗಳಲ್ಲಿ ಶ್ರೀಲಂಕಾ ತಂಡವನ್ನು ಮುನ್ನೆಡೆಸಿದ್ದರು.
ಮ್ಯಾಥ್ಯೂಸ್ ನಾಯಕತ್ವದಲ್ಲಿ ಶ್ರೀಲಂಕಾ ತಂಡವು 2015ರ ಏಕದಿನ ವಿಶ್ವಕಪ್, 2016ರ ಟಿ20 ವಿಶ್ವಕಪ್ ಹಾಗೂ 2017ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ವಿಫಲವಾಗಿತ್ತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.