ಎರಡನೇ ದಿನದಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೇ 8 ರನ್ ಗಳಿಸಿದ್ದ ಆಸ್ಟ್ರೇಲಿಯಾಗೆ ಮೂರನೇ ದಿನದ ಆರಂಭದಲ್ಲೇ ಇಶಾಂತ್ ಶರ್ಮಾ ಶಾಕ್ ನೀಡಿದರು. ಫಿಂಚ್ 8 ರನ್ ಬಾರಿಸಿ ಪೆವಿಲಿಯನ್ ಸೇರಿದರು.
ಮೆಲ್ಬರ್ನ್[ಡಿ.28]: ಟೀಂ ಇಂಡಿಯಾ ಮಾರಕ ದಾಳಿಗೆ ತತ್ತರಿಸಿರುವ ಆಸ್ಟ್ರೇಲಿಯಾ 6 ವಿಕೆಟ್ ಕಳೆದುಕೊಂಡು 102 ರನ್ ಬಾರಿಸಿದ್ದು, ಫಾಲೋ ಆನ್’ನತ್ತ ಮುಖ ಮಾಡಿದೆ. ಭಾರತ ಪರ ಜಸ್ಪ್ರೀತ್ ಬುಮ್ರಾ 3, ರವೀಂದ್ರ ಜಡೇಜಾ 2 ಹಾಗೂ ಇಶಾಂತ್ ಶರ್ಮಾ 1 ವಿಕೆಟ್ ಪಡೆದಿದ್ದಾರೆ.
ಎರಡನೇ ದಿನದಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೇ 8 ರನ್ ಗಳಿಸಿದ್ದ ಆಸ್ಟ್ರೇಲಿಯಾಗೆ ಮೂರನೇ ದಿನದ ಆರಂಭದಲ್ಲೇ ಇಶಾಂತ್ ಶರ್ಮಾ ಶಾಕ್ ನೀಡಿದರು. ಫಿಂಚ್ 8 ರನ್ ಬಾರಿಸಿ ಪೆವಿಲಿಯನ್ ಸೇರಿದರು. ಆ ಬಳಿಕ ಹ್ಯಾರಿಸ್-ಉಸ್ಮಾನ್ ಖ್ವಾಜಾ ತಂಡಕ್ಕೆ ಅಲ್ಪ ಚೇತರಿಕೆ ನೀಡಲು ಪ್ರಯತ್ನಿಸಿದರಾದರೂ ಅದಕ್ಕೆ ಭಾರತೀಯ ಬೌಲರ್’ಗಳು ಅವಕಾಶ ನೀಡಲಿಲ್ಲ. ಹ್ಯಾರಿಸ್, ಶಾನ್ ಮಾರ್ಷ್ ಮತ್ತು ಟ್ರಾವಿಸ್ ಹೆಡ್ ಅವರನ್ನು ಬುಮ್ರಾ ಪೆವಿಲಿಯನ್’ಗೆ ಅಟ್ಟಿದರೆ, ಉಸ್ಮಾನ್ ಖ್ವಾಜಾ ಹಾಗೂ ಮಿಚೆಲ್ ಮಾರ್ಷ್ ಅವರನ್ನು ಜಡೇಜಾ ಬಲಿ ಪಡೆದರು.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 7 ವಿಕೆಟ್ ನಷ್ಟಕ್ಕೆ 443 ರನ್ ಬಾರಿಸಿ ಮೊದಲ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿದೆ.
ಸಂಕ್ಷಿಪ್ತ ಸ್ಕೋರ್:
ಭಾರತ: 443/7
ಆಸ್ಟ್ರೇಲಿಯಾ: 102/6