ಮೆಲ್ಬರ್ನ್ ಟೆಸ್ಟ್: ಮಯಾಂಕ್ ವಿಕೆಟ್ ಪತನ

Published : Dec 26, 2018, 10:49 AM IST
ಮೆಲ್ಬರ್ನ್ ಟೆಸ್ಟ್: ಮಯಾಂಕ್ ವಿಕೆಟ್ ಪತನ

ಸಾರಾಂಶ

ಆಸ್ಟ್ರೇಲಿಯಾದ ಬಲಿಷ್ಠ ಬೌಲಿಂಗ್ ಪಡೆಯನ್ನು ಆತ್ಮವಿಶ್ವಾಸದಿಂದಲೇ ಎದುರಿಸಿದ ಮಯಾಂಕ್ ಶತಕದತ್ತ ಮುನ್ನುಗ್ಗುತ್ತಿದ್ದರು. ಈ ವೇಳೆ ಪ್ಯಾಟ್ ಕಮ್ಮಿನ್ಸ್ ಬೌಲಿಂಗ್’ನಲ್ಲಿ ಟಿಮ್ ಪೈನೆಗೆ ಕ್ಯಾಚಿತ್ತು ಪೆವಿಲಿಯನ್ ಸೇರಿದರು.

ಮೆಲ್ಬರ್ನ್[ಡಿ.26]: ಭರ್ಜರಿ ಅರ್ಧಶತಕ ಸಿಡಿಸುವ ಮೂಲಕ ಪದಾರ್ಪಣೆ ಪಂದ್ಯವನ್ನು ಸ್ಮರಣೀಯವಾಗಿಸಿಕೊಂಡ ಕನ್ನಡಿಗ ಮಯಾಂಕ್ ಅಗರ್’ವಾಲ್ 76 ರನ್ ಬಾರಿಸಿ ವಿಕೆಟ್ ಒಪ್ಪಿಸಿದ್ದಾರೆ. 

ಆಸ್ಟ್ರೇಲಿಯಾದ ಬಲಿಷ್ಠ ಬೌಲಿಂಗ್ ಪಡೆಯನ್ನು ಆತ್ಮವಿಶ್ವಾಸದಿಂದಲೇ ಎದುರಿಸಿದ ಮಯಾಂಕ್ ಶತಕದತ್ತ ಮುನ್ನುಗ್ಗುತ್ತಿದ್ದರು. ಈ ವೇಳೆ ಪ್ಯಾಟ್ ಕಮ್ಮಿನ್ಸ್ ಬೌಲಿಂಗ್’ನಲ್ಲಿ ಟಿಮ್ ಪೈನೆಗೆ ಕ್ಯಾಚಿತ್ತು ಪೆವಿಲಿಯನ್ ಸೇರಿದರು. ಆಕರ್ಷಕ ಡ್ರೈವ್ ಹಾಗೂ ಕಲಾತ್ಮಕ ಬ್ಯಾಟಿಂಗ್ ಮೂಲಕ ಪ್ರೇಕ್ಷಕರನ್ನು ರಂಜಿಸಿದ ಮಯಾಂಕ್ ಇನ್ನಿಂಗ್ಸ್’ನಲ್ಲಿ 8 ಬೌಂಡರಿ ಹಾಗೂ 1 ಸಿಕ್ಸರ್ ಕೂಡಾ ಸೇರಿತ್ತು. 

ಮುರುಳಿ ವಿಜಯ್-ಕೆ.ಎಲ್ ರಾಹುಲ್ ಸ್ಥಾನದಲ್ಲಿ ಆಡಲಿಳಿದ ಮಯಾಂಕ್ ಚೊಚ್ಚಲ ಪಂದ್ಯದಲ್ಲೇ ಅರ್ಧಶತಕ ಸಿಡಿಸುವ ಮೂಲಕ ಭಾರತ ಪರ ಆರಂಭಿಕನಾಗಿ ಪದಾರ್ಪಣೆ ಪಂದ್ಯದಲ್ಲೇ ಅರ್ಧಶತಕ ಸಿಡಿಸಿದ 7ನೇ ಕ್ರಿಕೆಟಿಗ ಎನ್ನುವ ಕೀರ್ತಿಗೆ ಮಯಾಂಕ್ ಪಾತ್ರರಾಗಿದ್ದಾರೆ. 

ಇದೀಗ ಭಾರತ 64 ಓವರ್ ಮುಕ್ತಾಯದ ವೇಳೆಗೆ 2 ವಿಕೆಟ್ ಕಳೆದುಕೊಂಡು 159 ರನ್ ಬಾರಿಸಿದ್ದು, ಪೂಜಾರ 44 ಹಾಗೂ ವಿರಾಟ್ ಕೊಹ್ಲಿ 23 ರನ್ ಬಾರಿಸಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

One8 ಸ್ಪೋರ್ಟ್ಸ್ ಬ್ರ್ಯಾಂಡ್ ಮಾರಾಟಕ್ಕೆ ಮುಂದಾದ ಕೊಹ್ಲಿ, 40 ಕೋಟಿ ಹೂಡಿಕೆ ಪ್ಲಾನ್
ಸ್ಮೃತಿ ಮಂಧನಾ ಮದುವೆ ಮುರಿದ ಬಳಿಕ ಟೀಮ್‌ ಇಂಡಿಯಾ ಆಟಗಾರ್ತಿಯರ ಮಹಾ ನಿರ್ಧಾರ!