ನಿವೃತ್ತಿ ಹಿಂಪಡೆದು ಕ್ರಿಕೆಟ್ ಆಡುತ್ತೇನೆ ಎಂದ ವಿಶ್ವಕಪ್ ವಿನ್ನಿಂಗ್ ಕ್ಯಾಪ್ಟನ್

By Suvarna Web DeskFirst Published Apr 9, 2018, 6:37 PM IST
Highlights

ಬಾಲ್ ಟ್ಯಾಂಪರಿಂಗ್ ಪ್ರಕರಣದಿಂದಾಗಿ ಸ್ಟೀವ್ ಸ್ಮಿತ್ ಹಾಗೂ ಡೇವಿಡ್ ವಾರ್ನರ್‌ರನ್ನು ಕಳೆದುಕೊಂಡಿರುವ ಆಸ್ಟ್ರೇಲಿಯಾ ತಂಡ ಸಂಕಷ್ಟಕ್ಕೆ ಸಿಲುಕಿದ್ದು, ತಂಡಕ್ಕೆ ಚೇತರಿಕೆ ನೀಡಲು ನಿವೃತ್ತಿ ಹಿಂಪಡೆದು ತಂಡಕ್ಕೆ ಮರಳಲು ಕ್ಲಾಕ್ ಇಚ್ಛಿಸಿದ್ದಾರೆ.

ಸಿಡ್ನಿ(ಏ.09): ಆಸ್ಟ್ರೇಲಿಯಾ ಕ್ರಿಕೆಟ್ ತಂಡ ನಿವೃತ್ತ ನಾಯಕ ಮೈಕಲ್ ಕ್ಲಾರ್ಕ್, ಆಸ್ಟ್ರೇಲಿಯಾ ಪರ ಮತ್ತೆ ಆಡಲು ಸಿದ್ಧರಿರುವುದಾಗಿ ಹೇಳಿಕೊಂಡಿದ್ದಾರೆ. 2015ರ ವಿಶ್ವಕಪ್ ಗೆಲ್ಲಿಸಿಕೊಟ್ಟ ಕ್ಲಾಕ್ ಒಂದೊಮ್ಮೆ ತಂಡ ಬಯಸಿದರೆ ಮತ್ತೊಮ್ಮೆ ರಾಷ್ಟ್ರೀಯ ತಂಡದಲ್ಲಿ ಕಣಕ್ಕಿಳಿಯುವುದಾಗಿ ಹೇಳಿದ್ದಾರೆ.

ಬಾಲ್ ಟ್ಯಾಂಪರಿಂಗ್ ಪ್ರಕರಣದಿಂದಾಗಿ ಸ್ಟೀವ್ ಸ್ಮಿತ್ ಹಾಗೂ ಡೇವಿಡ್ ವಾರ್ನರ್‌ರನ್ನು ಕಳೆದುಕೊಂಡಿರುವ ಆಸ್ಟ್ರೇಲಿಯಾ ತಂಡ ಸಂಕಷ್ಟಕ್ಕೆ ಸಿಲುಕಿದ್ದು, ತಂಡಕ್ಕೆ ಚೇತರಿಕೆ ನೀಡಲು ನಿವೃತ್ತಿ ಹಿಂಪಡೆದು ತಂಡಕ್ಕೆ ಮರಳಲು ಕ್ಲಾಕ್ ಇಚ್ಛಿಸಿದ್ದಾರೆ.

‘ಆಸ್ಟ್ರೇಲಿಯಾ ತಂಡಕ್ಕೆ ಸಹಾಯವಾಗುವುದಾದರೆ ನಾನು ಏನು ಬೇಕಿದ್ದರೂ ಮಾಡಲು ಸಿದ್ಧ. ವಯಸ್ಸು ಕೇವಲ ಸಂಖ್ಯೆಯಷ್ಟೇ. ಮೊದಲಿನಂತಲೇ ಈ ನಾನು ದೈಹಿಕ ಕ್ಷಮತೆ ಹೊಂದಿದ್ದೇನೆ. ಕ್ರಿಕೆಟ್ ಆಸ್ಟ್ರೇಲಿಯಾ ಅವಕಾಶ ಕೊಟ್ಟರೆ ತಂಡಕ್ಕೆ ಮರಳುತ್ತೇನೆ’ ಎಂದು ಕ್ಲಾರ್ಕ್ ಹೇಳಿದ್ದಾರೆ.

click me!