
ಕರಾಚಿ(ಮಾ.06): ಮುಂದಿನ ತಿಂಗಳಿನಲ್ಲಿ ವೆಸ್ಟ್ ಇಂಡೀಸ್ ಪ್ರವಾಸ ಕೈಗೊಳ್ಳಲಿರುವ ಪಾಕಿಸ್ತಾನ ಟೆಸ್ಟ್ ತಂಡವನ್ನು ಮಿಸ್ಬಾ-ಉಲ್-ಹಕ್ ಮುನ್ನೆಡೆಸಲಿದ್ದಾರೆಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಸ್ಪಷ್ಟಪಡಿಸಿದೆ.
ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್ ವಿರುದ್ಧ ವೈಟ್'ವಾಷ್ ಅನುಭವಿಸಿದ ಬೆನ್ನಲ್ಲೇ ಮಿಸ್ಬಾ ಅವರನ್ನು ನಾಯಕತ್ವದ ಕೆಳಗಿಳಿಸಬೇಕೆಂದು ಹಿರಿಯ ಕ್ರಿಕೆಟಿಗರು ಆಗ್ರಹಿಸಿದ್ದರು.
ಮಿಸ್ಬಾ ಆಯ್ಕೆಯನ್ನು ಖಚಿತಪಡಿಸಿರುವ ಪಿಸಿಬಿ ಅಧ್ಯಕ್ಷ ಶಹರ್ಯಾರ್ ಖಾನ್, ವೆಸ್ಟ್'ಇಂಡೀಸ್ ಸರಣಿಗೆ ತಾವು ಲಭ್ಯವಿರುವುದಾಗಿ ಮಿಸ್ಬಾ ತಿಳಿಸಿದ್ದರು. ಆಯ್ಕೆ ಸಮಿತಿ ಚರ್ಚಿಸಿ ಮಿಸ್ಬಾ ಅವರನ್ನೇ ನಾಯಕರನ್ನಾಗಿ ಮುಂದುವರಿಸಲು ತೀರ್ಮಾನಿಸಲಾಯಿತು ಎಂದಿದ್ದಾರೆ.
ಮೂರು ಪಂದ್ಯಗಳ ಟೆಸ್ಟ್ ಸರಣಿಯು ಏಪ್ರಿಲ್ 22ರಿಂದ ಬಾರ್ಬಡೋಸ್'ನಲ್ಲಿ ಆರಂಭವಾಗಲಿದೆ.
ಪಾಕಿಸ್ತಾನ ಕಂಡ ಅತ್ಯಂತ ಯಶಸ್ವಿ ನಾಯಕ ಎನ್ನುವ ಕೀರ್ತಿಗೆ ಭಾಜನರಾಗಿರುವ ಮಿಸ್ಬಾ-ಉಲ್-ಹಕ್ 74 ಟೆಸ್ಟ್ ಪಂದ್ಯಗಳನ್ನಾಡಿದ್ದು 53 ಬಾರಿ ಪಾಕಿಸ್ತಾನ ತಂಡವನ್ನು ಮುಂದುವರೆಸಿದ್ದಾರೆ. ಅದಲ್ಲಿ 24 ಪಂದ್ಯಗಳನ್ನು ಗೆದ್ದಿದ್ದರೆ, 18 ಪಂದ್ಯಗಳಲ್ಲಿ ಪಾಕಿಸ್ತಾನ ತಂಡ ಸೋತಿದೆ. ಇನ್ನು 11 ಪಂದ್ಯಗಳು ಡ್ರಾ ಕಂಡಿವೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.