
ಮೆಲ್ಬರ್ನ್: ಕಳೆದ ಸಾಲಿನ ಐಪಿಎಲ್ ಪಂದ್ಯಕ್ಕೆ ಗಾಯದ ಸಮಸ್ಯೆಯಿಂದಾಗಿ ಒಂದೂ ಪಂದ್ಯ ಆಡದಿದ್ದ ಕೋಲ್ಕತಾ ನೈಟ್ ರೈಡರ್ಸ್ ಆಟಗಾರ, ಆಸ್ಟ್ರೇಲಿಯಾ ಎಡಗೈ ವೇಗಿ ಮಿಚೆಲ್ ಸ್ಟಾರ್ಕ್ ಈಗ ಐಪಿಎಲ್ ಒಪ್ಪಂದದ ಪ್ರಕಾರ ವಿಮಾ ಸೌಲಭ್ಯ ಪಡೆದುಕೊಳ್ಳಲು ಕಾನೂನಿನ ಮೊರೆ ಹೋಗಿದ್ದಾರೆ ಎಂದು ಆಸ್ಟ್ರೇಲಿಯಾ ಮಾಧ್ಯಮವೊಂದು ವರದಿ ಮಾಡಿದೆ.
ವಿಶ್ವಕಪ್ ಟೂರ್ನಿಗೂ ಮುನ್ನ ಆಸ್ಟ್ರೇಲಿಯಾಗೆ ಡಬಲ್ ಶಾಕ್!
‘ಸಿಡ್ನಿ ಮಾರ್ನಿಂಗ್ ಹೆರಾಲ್ಡ್’ ಈ ಕುರಿತು ವರದಿ ಪ್ರಕಟಿಸಿದ್ದು, ಸ್ಟಾರ್ಕ್ ಕಳೆದ ವಾರ ವಿಕ್ಟೋರಿಯನ್ ಕೌಂಟಿ ಕೋರ್ಟ್‌ನಲ್ಲಿ ವಿಮಾ ಸೌಲಭ್ಯ ಪಡೆದುಕೊಳ್ಳಲು ಅರ್ಜಿ ಸಲ್ಲಿಸಿದ್ದಾರೆ. ಐಪಿಎಲ್ ಹಿಂದಿನ ಆವೃತ್ತಿಗೂ ಮೊದಲು ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲೇ ಸ್ಟಾರ್ಕ್ ಗಾಯಗೊಂಡಿದ್ದರು. ಅಲ್ಲದೆ, ಈ ಕಾರಣಕ್ಕಾಗಿ ಐಪಿಎಲ್ ಟೂರ್ನಿಯಲ್ಲಿ ಒಂದೇ
ಒಂದು ಪಂದ್ಯವನ್ನೂ ಆಡಿರಲಿಲ್ಲ.
2018ರ ಆವೃತ್ತಿಗಾಗಿ ಕೆಕೆಆರ್, ಆಸೀಸ್ ವೇಗಿ ಮಿಚೆಲ್ ಸ್ಟಾರ್ಕ್ ಜೊತೆ ₹10.60ಕೋಟಿ ಒಪ್ಪಂದ ಮಾಡಿಕೊಂಡು ಖರೀದಿಸಿತ್ತು. ಗಾಯದಿಂದಾಗಿ ಸ್ಟಾರ್ಕ್ ಭಾರತಕ್ಕೆ ಬಂದಿರಲಿಲ್ಲ.
ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.