ಕಳ್ಳಾಟದ ಆರೋಪದಡಿ ಇರ್ಫಾನ್'ಗೆ ಗೇಟ್'ಪಾಸ್..?

Published : Mar 14, 2017, 12:56 PM ISTUpdated : Apr 11, 2018, 01:10 PM IST
ಕಳ್ಳಾಟದ ಆರೋಪದಡಿ ಇರ್ಫಾನ್'ಗೆ ಗೇಟ್'ಪಾಸ್..?

ಸಾರಾಂಶ

ನಿನ್ನೆಯಷ್ಟೇ ಮೊಹಮದ್ ಇರ್ಫಾನ್ ಪಿಸಿಎಲ್ ವೇಳೆ ಬುಕ್ಕಿಗಳ ಜತೆ ಸಂಪರ್ಕದಲ್ಲಿದ್ದ ಸ್ಫೋಟಕ ಸತ್ಯವನ್ನು ಬಹಿರಂಗಗೊಳಿಸಿ, ವಿಷಯವನ್ನು ಭ್ರಷ್ಟಾಚಾರ ನಿಗ್ರಹ ದಳಕ್ಕೆ ತಿಳಿಸಿಲ್ಲ ಎಂದು ತಪ್ಪೊಪ್ಪಿಕೊಂಡಿದ್ದರು.

ಕರಾಚಿ(ಮಾ.14): ಪಾಕಿಸ್ತಾನ ಸೂಪರ್ ಲೀಗ್ ಟಿ20 ಟೂರ್ನಿಯ ವೇಳೆ ಕಳ್ಳಾಟದಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ವೇಗಿ ಮೊಹಮದ್ ಇರ್ಫಾನ್ ಅವರನ್ನು ಪಾಕಿಸ್ತಾನ ಕ್ರಿಕೆಟ್ ಬೋರ್ಡ್ ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ತಾತ್ಕಾಲಿಕವಾಗಿ ನಿಷೇಧಗೊಳಿಸಿದೆ.

ಇರ್ಫಾನ್ ಜತೆ ಕ್ವೆಟ್ಟಾ ಗ್ಲೇಡಿಯೇಟರ್ಸ್‌ ತಂಡದ ಝುಲಿಕರ್ ಬಾಬರ್ ಹಾಗೂ ಕರಾಚಿ ಕಿಂಗ್ಸ್‌'ನ ಆರಂಭಿಕ ಬ್ಯಾಟ್ಸ್‌ಮನ್ ಶಝೈಬ್ ಹಸನ್ ಅವರನ್ನೂ ವಿಚಾರಣೆಗೆ ಒಳಪಡಿಸಿದೆ. ನಿಷೇಧದ ವಿಷಯವನ್ನು ಧೃಡೀಕರಿಸಿರುವ ಪಿಸಿಬಿ ತನ್ನ ಪ್ರಕಟಣೆಯಲ್ಲಿ ಇರ್ಫಾನ್'ಗೆ ಉತ್ತರಿಸಲು 14 ದಿನಗಳ ಕಾಲಾವಕಾಶ ನೀಡಲಾಗಿದೆ ಎಂದು ತಿಳಿಸಿದೆ.

ನಿನ್ನೆಯಷ್ಟೇ ಮೊಹಮದ್ ಇರ್ಫಾನ್ ಪಿಸಿಎಲ್ ವೇಳೆ ಬುಕ್ಕಿಗಳ ಜತೆ ಸಂಪರ್ಕದಲ್ಲಿದ್ದ ಸ್ಫೋಟಕ ಸತ್ಯವನ್ನು ಬಹಿರಂಗಗೊಳಿಸಿ, ವಿಷಯವನ್ನು ಭ್ರಷ್ಟಾಚಾರ ನಿಗ್ರಹ ದಳಕ್ಕೆ ತಿಳಿಸಿಲ್ಲ ಎಂದು ತಪ್ಪೊಪ್ಪಿಕೊಂಡಿದ್ದರು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಟಿ20 ವಿಶ್ವಕಪ್ ತಂಡದಲ್ಲಿ ಸಂಚಲನ: ಸಂಜು ಸ್ಯಾಮ್ಸನ್ ಸ್ಥಾನಕ್ಕೆ ಕುತ್ತು?
ಕೊಹ್ಲಿ-ರೋಹಿತ್ ಮುಂದಿನ ವಿಜಯ್ ಹಜಾರೆ ಟ್ರೋಫಿ ಮ್ಯಾಚ್ ಆಡೋದು ಯಾವಾಗ? ಲೈವ್ ಸ್ಟ್ರೀಮ್ ಇರುತ್ತಾ?