ರಾಜಕೀಯಕ್ಕೆ ಧುಮುಕಿದ ಕ್ರಿಕೆಟಿಗ ಮೊಹಮ್ಮದ್ ಶಮಿ ಪತ್ನಿ!

Published : Oct 17, 2018, 11:33 AM IST
ರಾಜಕೀಯಕ್ಕೆ ಧುಮುಕಿದ ಕ್ರಿಕೆಟಿಗ ಮೊಹಮ್ಮದ್ ಶಮಿ ಪತ್ನಿ!

ಸಾರಾಂಶ

ಟೀಂ ಇಂಡಿಯಾ ಕ್ರಿಕೆಟಿಗ ಮೊಹಮ್ಮದ್ ಶಮಿ ವಿರುದ್ಧ ಪತ್ನಿ ಹಸಿನ್ ಜಹಾನ್ ಹೋರಾಟಕ್ಕೆ ಇದೀಗ ರಾಜಕೀಯ ಶಕ್ತಿಯೂ ಸೇರ್ಪಡೆಗೊಂಡಿದೆ. ಇಷ್ಟು ದಿನ ಏಕಾಂಗಿ ಹೋರಾಟ ನಡೆಸುತ್ತಿದ್ದ ಹಸಿನ್ ಇದೀಗ ಕಾಂಗ್ರೆಸ್ ಪಕ್ಷ ಸೇರಿಕೊಂಡು ಕಾನೂನು ಹೋರಾಟಕ್ಕೆ ಮುಂಜಾಗಿದ್ದಾರೆ. 

ಮುಂಬೈ(ಅ.17): ಕ್ರಿಕೆಟಿಗ ಮೊಹಮ್ಮದ್ ಶಮಿ ವಿರುದ್ಧ ಕಾನೂನು ಹೋರಾಟ ಮಾಡುತ್ತಿರುವ ಪತ್ನಿ ಹಸಿನ್ ಜಹಾನ್ ಇದೀಗ ಕಾಂಗ್ರೆಸ್ ಪಕ್ಷ ಸೇರಿಕೊಂಡಿದ್ದಾರೆ. ಮುಂಬೈನ ಕಾಂಗ್ರೆಸ್ ಅಧ್ಯಕ್ಷ  ಸಂಜಯ್ ನಿರುಪಮ್ ಹಾಗೂ ಇತರ ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿ ಹಸಿನ್ ಜಹಾನ್ ಕಾಂಗ್ರೆಸ್ ಪಕ್ಷ ಸೇರಿಕೊಂಡಿದ್ದಾರೆ. 

 

 

ಮೊಹಮ್ಮದ್ ಶಮಿ ಹಾಗೂ ಪತ್ನಿ ಹಸಿನ್ ಜಹಾನ್ ನಡುವಿನ ಜಗಳ ಶುರುವಾಗಿ ಹಲವು ವರ್ಷಗಳು ಉರುಳಿದೆ. ಶಮಿ ಬೇರೆ ಯುವತಿ ಜೊತೆ ರಹಸ್ಯ ಮದುವೆಯಾಗಿದ್ದಾರೆ ಅನ್ನೋ ಆರೋಪದಿಂದ ಆರಂಭಗೊಂಡ ಜಗಳ ದಿನದಿಂದ ದಿನಕ್ಕೆ ಹೊಸ ಹೊಸ ರೂಪ ಪಡೆದುಕೊಂಡಿತ್ತು. 

ಮಾನಸಿಕ ಹಿಂಸೆ, ದೈಹಿಕ ಹಿಂಸೆ, ವಂಚನೆ ಆರೋಪ ಸೇರಿದಂತೆ ಶಮಿ ವಿರುದ್ಧ ಹಲವು ಪ್ರಕರಣ ದಾಖಲಿಸಿದ ಶಮಿ ಪತ್ನಿ ಹಸಿನ್ ಜಹಾನ್ ಕಾನೂನು ಹೋರಾಟ ನಡೆಸುತ್ತಿದ್ದಾರೆ.

ತಮಗೆ ನ್ಯಾಯ ಕೊಡಿಸಿ ಎಂದು ಪಶ್ಚಿಮ ಬಂಗಾ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನೂ ಬೇಟಿಯಾಗಿದ್ದರು. ಇದೀಗ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪೆಡೆಯಾಗೋ ಮೂಲಕ ಹಸಿನ್ ಜಹಾನ್ ರಾಜಕೀಯ ಶಕ್ತಿ ಬಳಸಿ ಹೋರಾಟ ನಡೆಸಲು ಮುಂದಾಗಿದ್ದಾರೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರಲ್ಲಿ ಐಪಿಎಲ್‌ ನಡೆಸಲು ಸಂಪುಟ ಅಸ್ತು
ಡಿಕಾಕ್‌ ಡ್ಯಾಶಿಂಗ್‌ ಆಟದ ಮುಂದೆ ಥಂಡಾ ಹೊಡೆದ ಟೀಮ್‌ ಇಂಡಿಯಾ!