
ಮುಂಬೈ(ಮಾ.22): ವೇಗದ ಬೌಲರ್ ಮೊಹಮದ್ ಶಮಿಗೆ ಹೆಂಡತಿ ಹಸೀನ್ ಜಹಾನ್ ಮಾಡಿದ್ದ ಮ್ಯಾಚ್ ಫಿಕ್ಸಿಂಗ್ ಆರೋಪಕ್ಕೆ ಬಿಸಿಸಿಐ ಕ್ಲೀನ್ ಚಿಟ್ ನೀಡಿದೆ.
ಪಾಕಿಸ್ತಾನಿ ಮಹಿಳೆಯೊಬ್ಬಳಿಂದ ದುಬೈ'ನಲ್ಲಿ ಹಣ ಸ್ವೀಕರಿಸಲಾಗಿತ್ತು ಎಂಬ ಆರೋಪದಲ್ಲಿ ಯಾವುದೇ ಆಧಾರವಿಲ್ಲದ ಕಾರಣ ಬಿಸಿಸಿಐನ ಭ್ರಷ್ಟಾಚಾರ ವಿರೋಧಿ ಘಟಕ ಕ್ಕೀನ್ ಚಿಟ್ ನೀಡಿದ್ದು, ವಾರ್ಷಿಕ ಗುತ್ತಿಗೆಯಲ್ಲಿ ಗ್ರೇಡ್ ಬಿ ಆಟಗಾರರನ್ನಾಗಿ ಆಯ್ಕೆ ಮಾಡಲಾಗಿದೆ' ಎಂದು ಬಿಸಿಸಿಐನ ಎಸಿಬಿ ಘಟಕದ ಮುಖ್ಯಸ್ಥ ನೀರಜ್ ಕುಮಾರ್ ತಿಳಿಸಿದ್ದಾರೆ.
ಶಮಿ ಪತ್ನಿ ಹಸೀನಾ ತಮಗೆ ವರದಕ್ಷಿಣೆ ಕಿರುಕುಳ, ಕೊಲೆ ಯತ್ನ ಸೇರಿದಂತೆ ಹಲವು ಆರೋಪಗಳನ್ನು ಹೊರೆಸಿದ್ದು ಕೋಲ್ಕತ್ತಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಶಮಿ ಪತ್ನಿಯ ಎಲ್ಲ ಆರೋಪಗಳನ್ನು ನಿರಾಕರಿಸಿ ಆಕೆಗೆ ತಲೆ ಕೆಟ್ಟಿದೆ ಎಂದು ಹೇಳಿಕೆ ನೀಡಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.