
ಕೋಲ್ಕತ್ತಾ(ಜು.18): ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ವೇಗಿ ಮೊಹಮ್ಮದ್ ಶಮಿ ಆಯ್ಕೆಯಾಗೋ ಮೂಲಕ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಕಮ್‌ಬ್ಯಾಕ್ ಮಾಡಿದರು. ಆದರೆ ಶಮಿ ಸಂಭ್ರಮ ಹೆಚ್ಚು ಹೊತ್ತು ಇರಲಿಲ್ಲ. ಕಾರಣ ಮೊಹಮ್ಮದ್ ಶಮಿಗೆ ಇದೀಗ ಕೊಲ್ಕತ್ತಾ ಪೊಲೀಸರು ಸಮನ್ಸ್ ನೀಡಿದ್ದಾರೆ.
ಪತ್ನಿ ಹಸಿನ್ ಜಹಾನ್ ಹಾಗೂ ಶಮಿ ನಡುವಿನ ಜಟಾಪಟಿ ತಾರಕಕ್ಕೇರಿದೆ. ಮಾನಸಿಕ ಹಾಗೂ ದೈಹಿಕ ಹಿಂಸೆ, ಪತಿ ಬೇರೆ ಯುವತಿ ಜೊತೆ ರಹಸ್ಯ ಮದುವೆ ಸೇರಿದಂತೆ ಶಮಿ ವಿರುದ್ಧ ಪತ್ನಿ ಹಲವು ಆರೋಪ ಮಾಡಿದ್ದಾರೆ. ಪೊಲೀಸ್ ಠಾಣೆಯಲ್ಲಿ ದೂರುಕೂಡ ದಾಖಲಿಸಿದ್ದಾರೆ. ಇದೀಗ ಕಾನೂನು ಹೋರಾಟ ನಡೆಸುತ್ತಿರುವ ಪತ್ನಿ ಹಸಿನ್ ಜಹಾನ್ ಪಟ್ಟು ಬಿಗಿಗೊಳಿಸಿದ್ದಾರೆ.
ತನ್ನ ಜೀವನಾಂಶಕ್ಕೆ ಮಾಸಿಕ 10 ಲಕ್ಷ ರೂಪಾಯಿ ನೀಡುವಂತೆ ಹಸಿನ್ ಜಹಾನ್ ವಕೀಲರು ವಾದಿಸಿದ್ದರು. ಬಳಿಕ ಮಾಸಿಕ 1 ಲಕ್ಷ ರೂಪಾಯಿ ಒಪ್ಪಂದಕ್ಕೆ ಒಪ್ಪಿದ್ದರು. ಈ ಪ್ರಕಾರ ಶಮಿ 1 ಲಕ್ಷ ರೂಪಾಯಿ ಚೆಕ್ ನೀಡಿದ್ದಾರೆ. ಇದೀಗ ಈ ಚೆಕ್ ಬೌನ್ಸ್ ಆಗಿದ್ದು, ಕೋಲ್ಕತ್ತಾ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೊಟಿಸ್ ನೀಡಿದ್ದಾರೆ ಎಂದು ಮೊಜೋ ನ್ಯೂಸ್ ವರದಿ ಮಾಡಿದೆ.
ಇಂಗ್ಲೆಂಡ್ ವಿರುದ್ಧದ ಆರಂಭಿಕ 3 ಟೆಸ್ಟ್ ಪಂದ್ಯಕ್ಕೆ ವೇಗಿ ಮೊಹಮ್ಮದ್ ಶಮಿ ಆಯ್ಕೆಯಾಗಿದ್ದಾರೆ. ಆಗಸ್ಟ್ 1 ರಂದು ಟೀಂ ಇಂಡಿಯಾ ಆಂಗ್ಲರ ವಿರುದ್ಧ ಟೆಸ್ಟ್ ಪಂದ್ಯ ಆಡಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.