
ಹೈದರಾಬಾದ್(ಜ.25): ಭಾರತೀಯ ಕ್ರಿಕೆಟಿಗ ಮೊಹಮ್ಮದ್ ಸಿರಾಜ್ ಅವರ ಫೇಸ್'ಬುಕ್ ಖಾತೆಯನ್ನು ಹ್ಯಾಕ್ ಮಾಡಿದ ಆರೋಪದ ಮೇಲೆ 14 ವರ್ಷದ ಬಾಲಕನೋರ್ವನನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ.
ಸಿರಾಜ್'ರ ಫೇಸ್'ಬುಕ್ ಮಾತ್ರವಲ್ಲದೆ ಇನ್'ಸ್ಟಾಗ್ರಾಂ, ಟ್ವೀಟರ್, ಜಿ-ಮೇಲ್ ಖಾತೆಗಳನ್ನೂ ಹ್ಯಾಕ್ ಮಾಡಿದ್ದ ಆರೋಪಿ, ಅಕೌಂಟ್'ಗಳ ಮೂಲಕ ಕ್ರಿಕೆಟಿಗನ ಸ್ನೇಹಿತರಿಗೆ ‘ಐ ಲವ್ ಯೂ’ ಎಂದು ಸಂದೇಶಗಳನ್ನು ಕಳುಹಿಸಿದ್ದ. ಇದರಿಂದ ಗಲಿಬಿಲಿಗೊಂಡ ಸಿರಾಜ್ ಸ್ನೇಹಿತರು, ಕರೆ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ತನಿಖೆ ವೇಳೆ ಆತ ವಾಚ್'ಮನ್ ಒಬ್ಬರ ಮಗ ಎಂದು ತಿಳಿದುಬಂದಿದೆ.
ನನ್ನ ಸಾಮಾಜಿಕ ಜಾಲತಾಣಗಳ ಅಕೌಂಟ್ ಹ್ಯಾಕ್ ಆಗಿತ್ತು. ತೆಲಂಗಾಣ ಕ್ರೈಂ ಬ್ರಾಂಚ್ ಪೊಲೀಸರ ಸಹಾಯದಿಂದ ನನ್ನ ಖಾತೆಯನ್ನು ಭದ್ರಪಡಿಸಿಕೊಳ್ಳಲು ಅನುಕೂಲವಾಯಿತು ಎಂದು ಸಿರಾಜ್ ಇನ್'ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.