
ಚೆನ್ನೈ(ಜು.21): ಶನಿವಾರದಿಂದ ಎರಡನೇ ಆವೃತ್ತಿಯ ತಮಿಳುನಾಡು ಪ್ರೀಮಿಯರ್ ಲೀಗ್ ಆರಂಭಗೊಳ್ಳಲಿದ್ದು, ಪಂದ್ಯಾವಳಿಗೆ ಚಾಲನೆ ಸಿಗುವ ಮೊದಲು ಸಿಕ್ಸರ್ ಬಾರಿಸುವ ಸ್ಪರ್ಧೆ ನಡೆಯಲಿದೆ. ಈ ಸ್ಪರ್ಧೆಯಲ್ಲಿ ಭಾರತದ ತಂಡದ ಮಾಜಿ ನಾಯಕ ಎಂ.ಎಸ್.ಧೋನಿ, ಆಸೀಸ್ ಮಾಜಿ ಕ್ರಿಕೆಟಿಗ ಮ್ಯಾಥ್ಯೂ ಹೇಡನ್ ಪಾಲ್ಗೊಳ್ಳಲಿದ್ದಾರೆ ಎಂದು ಆಯೋಜಕರು ತಿಳಿಸಿದ್ದಾರೆ.
ಯಾರು ಅತಿ ದೂರಕ್ಕೆ ಸಿಕ್ಸರ್ ಬಾರಿಸಲಿದ್ದಾರೆ ಎನ್ನುವ ಸ್ಪರ್ಧೆ ಇದಾಗಿದ್ದು, ಬೌಲಿಂಗ್ ಮಷೀನ್'ನಿಂದ ಬರುವ ಚೆಂಡನ್ನು ಯಾರು ಅತೀ ದೂರಕ್ಕೆ ಬಾರಿಸುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ.
ಧೋನಿ ಹಾಗೂ ಸಿಎಸ್'ಕೆ ಮಾಜಿ ಆಟಗಾರ ಮ್ಯಾಥ್ಯೂ ಹೇಡನ್ ಮಾತ್ರವಲ್ಲದೇ ಎಸ್.ಬದ್ರೀನಾಥ್, ಪವನ್ ನೇಗಿ, ಮೋಹಿತ್ ಶರ್ಮಾ, ಅನಿರುದ್ಧ ಶ್ರೀಕಾಂತ್ ಕೂಡಾ ಪೈಪೋಟಿ ನೀಡಲಿದ್ದಾರೆ.
ಟಿಎನ್'ಪಿಎಲ್ ಟೂರ್ನಿಗೂ ಮುನ್ನ ಸಂಜೆ 6ಕ್ಕೆ ಸಿಕ್ಸರ್ ಬಾರಿಸುವ ಸ್ಪರ್ಧೆ ಆರಂಭಗೊಳ್ಳಲಿದ್ದು, 7 ಗಂಟೆ ವೇಳೆಗೆ ಮುಕ್ತಾಯಗೊಳ್ಳಲಿದೆ. ಆ ಬಳಿಕ ಟಿಎನ್'ಪಿಎಲ್ ಪಂದ್ಯಕ್ಕೆ ಅಧಿಕೃತ ಚಾಲನೆ ದೊರೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.