
ರಾಂಚಿ(ಮಾ.13): ಮೊಹಮ್ಮದ್ ಶಮಿ, ಪತ್ನಿ ಹಸೀನಾ ಜಹಾನ್ ನಡುವಿನ ವೈಮನಸ್ಸು ತಾರಕಕ್ಕೇರಿದ್ದು, ಜಹಾನ್ ಶಮಿ ಮೇಲೆ ಆರೋಪಗಳ ಸುರಿಮಳೆಯನ್ನೇ ಸುರಿಸಿದ್ದಾರೆ. ವಿವಾಯೇತರ ಸಂಬಂಧ, ಮ್ಯಾಚ್ ಫಿಕ್ಸಿಂಗ್ ಸೇರಿದಂತೆ ತನ್ನ ಮೇಲೆ ಶಮಿ ಹಾಗೂ ಆತತ ಕುಟುಂಬ ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡಿದ್ದಾರೆಂದು ಆರೋಪಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್ ಧೋನಿ ವೇಗಿ ಶಮಿ ಬೆಂಬಲಕ್ಕೆ ನಿಂತಿದ್ದಾರೆ. 'ನಾನು ಕಂಡಂತೆ ಶಮಿ ಒಬ್ಬ ಉತ್ತಮ ಮನುಷ್ಯ. ಅವರು ಪತ್ನಿಗೆ ಹಾಗೂ ದೇಶಕ್ಕೆ ಮೋಸ ಮಾಡಿದ್ದಾರೆ ಎಂದರೆ ನಂಬಲು ಸಾಧ್ಯವಿಲ್ಲ. ಇದು ಶಮಿ ವೈಯುಕ್ತಿಕ ಜೀವನದ ಸಮಸ್ಯೆ, ಹಾಗಾಗಿ ಇದರ ಬಗ್ಗೆ ನಾನು ಮಾತನಾಡಲು ಬಯಸುವುದಿಲ್ಲ' ಎಂದು ಹೇಳಿದ್ದಾರೆ.
ಈ ಮೊದಲು ಕೂಡಾ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗರಾದ ಕಪಿಲ್ ದೇವ್, ಚೇತನ್ ಚೌಹ್ಹಾಣ್ ಸೇರಿದಂತೆ ಅನೇಕ ಕ್ರಿಕೆಟಿಗರು ಶಮಿ ಬೆಂಬಲಕ್ಕೆ ನಿಂತಿದ್ದರು. ಪತ್ನಿ ಆರೋಪಕ್ಕೆ ಪ್ರತಿಕ್ರಿಯಿಸಿದ್ದ ಶಮಿ, ಒಂದು ವೇಳೆ ಸಾಯುತ್ತೇನೆಯೇ ಹೊರತು ದೇಶಕ್ಕೆ ಮೋಸ ಮಾಡುವುದಿಲ್ಲ ಎಂದು ಹೇಳಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.