ಎಂ.ಎಸ್.ಧೋನಿ ಸೂಪರ್ ಸ್ಟಾರ್ ಮಾತ್ರವಲ್ಲ ಯಾವತ್ತಿಗೂ ಶ್ರೇಷ್ಠ-ಲ್ಯಾಂಗರ್

Published : Jan 18, 2019, 09:39 PM IST
ಎಂ.ಎಸ್.ಧೋನಿ ಸೂಪರ್ ಸ್ಟಾರ್ ಮಾತ್ರವಲ್ಲ ಯಾವತ್ತಿಗೂ ಶ್ರೇಷ್ಠ-ಲ್ಯಾಂಗರ್

ಸಾರಾಂಶ

ಟೀಂ ಇಂಡಿಯಾ ಹಿರಿಯ ಕ್ರಿಕೆಟಿಗ ಎಂ.ಎಸ್.ಧೋನಿ ವಿರುದ್ಧ ಕೇಳಿ ಬಂದ ಟೀಕೆಗಳಿದೆ ಸ್ವತಃ ಧೋನಿ ಬ್ಯಾಟ್ ಮೂಲಕ ಉತ್ತರಿಸಿದ್ದಾರೆ. ಇದೀಗ ಆಸ್ಟ್ರೇಲಿಯಾ ಕೋಚ್ ಜಸ್ಟಿನ್ ಲ್ಯಾಂಗರ್ ಧೋನಿ ಯಾವತ್ತಿಗೂ ಶ್ರೇಷ್ಠ ಎಂದಿದ್ದಾರೆ. ಇಲ್ಲಿದೆ ಲ್ಯಾಂಗರ್ ಮೆಚ್ಚುಗೆಯ ಮಾತುಗಳ ವಿವರ.  

ಮೆಲ್ಬರ್ನ್(ಜ.18): ವಿಶ್ವಕಪ್ ಸರಣಿ ಪೂರ್ವಭಾವಿ ತಯಾರಿ ಆರಂಭಗೊಂಡಿರುವ ಬೆನ್ನಲ್ಲೇ ಟೀಂ ಇಂಡಿಯಾ ಹಿರಿಯ ಕ್ರಿಕೆಟಿಗ ಎಂ.ಎಸ್.ಧೋನಿ ಫಾರ್ಮ್ ಕಂಡುಕೊಂಡಿರುವುದು ತಂಡದ ಆತ್ಮವಿಶ್ವಾಸ ಹೆಚ್ಚಿಸಿದೆ. ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಸತತ 3 ಅರ್ಧಶತಕ ಸಿಡಿಸಿ ಸರಣಿ ಗೆಲುವಿನಲ್ಲಿ ಧೋನಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಇದೀಗ ಧೋನಿ ಪ್ರದರ್ಶನಕ್ಕೆ ಆಸ್ಟ್ರೇಲಿಯಾ ಕೋಚ್ ಜಸ್ಟಿನ್ ಲ್ಯಾಂಗರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:3ನೇ ಏಕದಿನದಲ್ಲಿ 7 ವಿಕೆಟ್ ಗೆಲುವು- ಭಾರತಕ್ಕೆ ಏಕದಿನ ಸರಣಿ!

 

ಎಂ.ಎಸ್.ಧೋನಿ ಸೂಪರ್ ಸ್ಟಾರ್. ಇಷ್ಟೇ ಅಲ್ಲ ಯಾವತ್ತಿಗೂ ಶ್ರೇಷ್ಠ ಕ್ರಿಕೆಟಿಗ ಎಂದು ಜಸ್ಟಿನ್ ಲ್ಯಾಂಗರ್ ಹೇಳಿದ್ದಾರೆ. ಧೋನಿ ಅನುಭವ, ಸ್ಕಿಲ್ ಟೀಂ ಇಂಡಿಯಾಗೆ ನೆರವಾಗುತ್ತಿದೆ. ಚೇಸಿಂಗ್‌ನಲ್ಲಿ ಧೋನಿಯನ್ನ ಮೀರಿಸುವುದು ಅಸಾಧ್ಯದ ಮಾತು ಎಂದು ಲ್ಯಾಂಗರ್ ಹೇಳಿದ್ದಾರೆ.

ಇದನ್ನೂ ಓದಿ: ಭಾರತಕ್ಕೆ ಏಕದಿನ ಸರಣಿ ಗೆಲುವು-ಸೆಹ್ವಾಗ್ ಸೇರಿದಂತೆ ದಿಗ್ಗಜರ ಟ್ವೀಟ್ ಅದ್ಬುತ!

37ರ ಹರೆಯದಲ್ಲೂ ಧೋನಿ ಫಿಟ್ ಆಗಿದ್ದಾರೆ. ಯುವಕರನ್ನೂ ನಾಚಿಸುವ ರೀತಿಯಲ್ಲಿ ರನ್ನಿಂಗ್ ಮಾಡುತ್ತಾರೆ. ಧೋನಿ ಅನುಭವ ಯುವ ಕ್ರಿಕೆಟಿಗರಿಗೆ ನೆರವಾಗುತ್ತಿದೆ ಎಂದಿದ್ದಾರೆ. ಆಸ್ಟ್ರೇಲಿಯಾ ಸೇರಿದಂತೆ ಇತರ ಕ್ರಿಕೆಟಿಗರು ಧೋನಿಯಿಂದ ಕಲಿಯಬೇಕಿದೆ ಎಂದು ಲ್ಯಾಂಗರ್ ಹೇಳಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!
ಹೃತಿಕ್‌ ರೋಶನ್‌ 'ಕ್ರಿಶ್‌' ಸಿನಿಮಾದಲ್ಲಿ ಬಾಲನಟಿಯಾಗಿದ್ರಾ ಧೋನಿ ಪತ್ನಿ ಸಾಕ್ಷಿ?