
ಚೆನ್ನೈ[ಮೇ.09]: ಮಹೇಂದ್ರ ಸಿಂಗ್ ಧೋನಿ ಟೀಂ ಇಂಡಿಯಾ ಕಂಡ ಅತ್ಯಂತ ಯಶಸ್ವಿ ನಾಯಕ. ಹಾಲಿ ಚೆನ್ನೈ ಸೂಪರ್’ಕಿಂಗ್ಸ್ ತಂಡವನ್ನು ಅತ್ಯಂತ ಯಶಸ್ವಿಯಾಗಿ ಮುನ್ನಡೆಸುತ್ತಿರುವ ಧೋನಿ ತಮ್ಮ ವೈಯುಕ್ತಿಕ ಜೀವನದ ಬಗ್ಗೆ ಖಾಸಗಿ ಕಾರ್ಯಕ್ರಮವೊಂದರಲ್ಲಿ ಮನಬಿಚ್ಚಿ ಮಾತನಾಡಿದ್ದಾರೆ.
ತನ್ನ ಮೊದಲ ಕ್ರಶ್ ಹೆಸರು ಸ್ವಾತಿ ಎಂದು ಹೇಳಿರುವ ಧೋನಿ, ಈ ವಿಚಾರವನ್ನು ಪತ್ನಿ ಸಾಕ್ಷಿಗೆ ಹೇಳಬೇಡಿ ಎಂದು ಹಾಸ್ಯಮಯವಾಗಿ ಎಚ್ಚರಿಕೆ ನೀಡಿದ್ದಾರೆ.
1999ರಲ್ಲಿ ಪಿಯುಸಿ ಓದುತ್ತಿದ್ದಾಗ ಕಡೆಯ ಬಾರಿಗೆ ಸ್ವಾತಿಯನ್ನು ನೋಡಿದ್ದಾಗಿ ಧೋನಿ ಹೇಳಿದ್ದಾರೆ. ಧೋನಿ ವೈಯುಕ್ತಿಕ ಜೀವನದ ಕುರಿತಂತೆ 2016ರಲ್ಲಿ ’ಎಂ.ಎಸ್. ಧೋನಿ: ದ ಅನ್’ಟೋಲ್ಡ್ ಸ್ಟೋರಿ’ ಚಿತ್ರ ತೆರೆಕಂಡು ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದಿತ್ತು.
ತನ್ನ ಮೊದಲ ಕ್ರಶ್ ಬಗ್ಗೆ ಧೋನಿ ಏನಂದ್ರೂ ಅನ್ನೋದನ್ನು ಅವರ ಮಾತುಗಳಲ್ಲೇ ಕೇಳಿ...
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.