ವಿಶ್ವಕಪ್ ಬಳಿಕವೂ ಧೋನಿ ತಂಡದಲ್ಲಿರಬೇಕು: ಗಂಗೂಲಿ!

Published : Mar 07, 2019, 09:48 PM IST
ವಿಶ್ವಕಪ್ ಬಳಿಕವೂ ಧೋನಿ ತಂಡದಲ್ಲಿರಬೇಕು: ಗಂಗೂಲಿ!

ಸಾರಾಂಶ

ಧೋನಿ ತಂಡದಲ್ಲಿರಬೇಕು, ಧೋನಿ ನಿವೃತ್ತಿಯಾಗಬೇಕು ಅನ್ನೋ ವಾದಗಳು ಹಲವು ವರ್ಷಗಳಿಂದಲೇ ಕೇಳಿಬರುತ್ತಿದೆ. 2019ರ ವಿಶ್ವಕಪ್ ದೃಷ್ಟಿಯಿಂದ ಧೋನಿ ತಂಡದಲ್ಲಿದ್ದರೆ ಉತ್ತಮ ಅನ್ನೋ ಮಾತುಗಳು ಬಲವಾಗುತ್ತಿದೆ. ಇದರ ಬೆನ್ನಲ್ಲೇ ಮಾಜಿ ನಾಯಕ ಗಂಗೂಲಿ ಧೋನಿ ಪರ ಬ್ಯಾಟ್ ಬೀಸಿದ್ದಾರೆ.   

ಮುಂಬೈ(ಮಾ.07): ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಟೀಂ ಇಂಡಿಯಾ ಕ್ರಿಕೆಟಿಗ ಎಂ.ಎಸ್.ಧೋನಿ ಪರ ಮಾಜಿ ನಾಯಕ ಸೌರವ್ ಗಂಗೂಲಿ ಬ್ಯಾಟ್ ಬೀಸಿದ್ದಾರೆ. 2019ರ ವಿಶ್ವಕಪ್ ಬಳಿಕವೂ ಧೋನಿ ತಂಡದಲ್ಲಿ ಮುಂದುವರಿಯಬೇಕು ಎಂದು ಗಂಗೂಲಿ ಹೇಳಿದ್ದಾರೆ.

ಇದನ್ನೂ ಓದಿ: ಇಂಡೋ-ಆಸಿಸ್ 3ನೇ ಏಕದಿನ: ಸಂಭವನೀಯ ಟೀಂ ಇಂಡಿಯಾ ಪ್ರಕಟ!

ವಯಸ್ಸು ಕೇವಲ ಸಂಖ್ಯೆ ಮಾತ್ರ. ಪ್ರತಿಭೆ ಇದ್ದರೆ ತಂಡದಲ್ಲಿ ಮಂದುವರಿಯುವುದು ಸೂಕ್ತ. ಧೋನಿ ಇದೇ ರೀತಿ ಬ್ಯಾಟಿಂಗ್ ಮಾಡಿದರೆ 2019ರ ವಿಶ್ವಕಪ್ ಭಾರತ ಗೆಲ್ಲಲಿದೆ ಎಂದು ಗಂಗೂಲಿ ಹೇಳಿದ್ದಾರೆ. ವಿಶ್ವಕಪ್ ಬಳಿಕವೂ ಧೋನಿ ತಂಡದಲ್ಲಿ ಮುಂದುವರಿಯಬೇಕು ಎಂದಿದ್ದಾರೆ.

ಇದನ್ನೂ ಓದಿ: ಐಪಿಎಲ್ ಪಂದ್ಯದ ಸಮಯ ಬಹಿರಂಗ ಪಡಿಸಿದ ಬಿಸಿಸಿಐ!

ಸದ್ಯ ಟೀಂ ಇಂಡಿಯಾ ಅತ್ಯುತ್ತಮ ಬೌಲಿಂಗ್ ವಿಭಾಗ ಹೊಂದಿದೆ. ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್ ಹಾಗೂ ಮೊಹಮ್ಮದ್ ಶಮಿ ಸೇರಿದಂತೆ ಟೀಂ ಇಂಡಿಯಾ ವೇಗಿಗಳು ಎದುರಾಳಿಯನ್ನ ಸುಲಭವಾಗಿ ಕಟ್ಟಿಹಾಕಬಲ್ಲರು ಎಂದು ಗಂಗೂಲಿ ಹೇಳಿದ್ದಾರೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

U19 Asia Cup ವೈಭವ್ ಸೂರ್ಯವಂಶಿ ದ್ವಿಶತಕ ಜಸ್ಟ್‌ ಮಿಸ್; ಉದ್ಘಾಟನಾ ಪಂದ್ಯದಲ್ಲೇ ಬೃಹತ್ ಮೊತ್ತ ಗಳಿಸಿದ ಭಾರತ!
U19 Asia Cup: ಮತ್ತೆ ಸಿಕ್ಸರ್ ಸುರಿಮಳೆ ಹರಿಸಿ ಸ್ಪೋಟಕ ಶತಕ ಚಚ್ಚಿದ ವೈಭವ್ ಸೂರ್ಯವಂಶಿ!