ರಾಂಚಿಯಲ್ಲಿ ಪ್ರತ್ಯಕ್ಷರಾದ ಧೋನಿ; MLA ಜೊತೆ ಬಿಲಿಯರ್ಡ್ಸ್ ಮೋಡಿ!

Published : Sep 29, 2019, 11:17 AM IST
ರಾಂಚಿಯಲ್ಲಿ ಪ್ರತ್ಯಕ್ಷರಾದ ಧೋನಿ; MLA ಜೊತೆ ಬಿಲಿಯರ್ಡ್ಸ್ ಮೋಡಿ!

ಸಾರಾಂಶ

ಟೀಂ ಇಂಡಿಯಾ ಕ್ರಿಕೆಟಿಗ  ಎಂ.ಎಸ್.ಧೋನಿ ಪ್ರತ್ಯಕ್ಷರಾಗಿದ್ದಾರೆ. ಈ ಬಾರಿ ಬಹರಗೋರಾ MLA ಹಾಗೂ ಜಾರ್ಖಂಡ್ ಪಿಚ್ ಕ್ಯೂರೇಟರ್ ಜೊತೆ ಧೋನಿ ಕಾಣಿಸಿಕೊಂಡಿದ್ದಾರೆ.   

ರಾಂಚಿ(ಸೆ.29): ವಿಶ್ವಕಪ್ ಟೂರ್ನಿ ಬಳಿಕ ಟೀಂ ಇಂಡಿಯಾದಿಂದ ದೂರ ಉಳಿದಿದ್ದ ಹಿರಿಯ ಕ್ರಿಕೆಟಿಗ ಎಂ.ಎಸ್.ಧೋನಿ ಇದೀಗ ಪ್ರತ್ಯಕ್ಷರಾಗಿದ್ದಾರೆ. ಬಹರಗೋರಾ MLA ಕುನಾಲ್ ಸಾರಂಗಿ ಜೊತೆ ಬಿಲಿಯರ್ಡ್ಸ್ ಆಡೋ ಮೂಲಕ  ಧೋನಿ ಮತ್ತೆ ಕ್ರೀಡೆಯತ್ತ ಮರಳಿದ್ದಾರೆ.

ಇದನ್ನೂ ಓದಿ: ಜನಮೆಚ್ಚಿದ ನಾಯಕರ ಸಮೀಕ್ಷೆ; ನಂ.1 ಮೋದಿ, ನಂತ್ರ ಧೋನಿ!

ಜಾರ್ಖಂಡ್ ಕ್ರಿಕೆಟ್ ಸಂಸ್ಥೆಯಲ್ಲಿ ಅಭ್ಯಾಸ ಆರಂಭಿಸಿರುವ ಧೋನಿ, ಒಳಾಂಗಣ ಕ್ರೀಡಾಂಗಣದಲ್ಲಿ ಸಾರಂಗಿ ಹಾಗೂ ಜಾರ್ಖಂಡ್ ಹಿರಿಯ ಪಿಚ್ ಪಿಚ್ ಕ್ಯೂರೇಟರ್ ಬಸು ದಾ ಜೊತೆ ಬಿಲಿಯರ್ಡ್ಸ್ ಆಡಿದ್ದಾರೆ. ಬಲಿಕ, ಬಸು ದಾ ಜೊತೆ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.

 

ಇದನ್ನೂ ಓದಿ: ಧೋನಿ ಅಲಭ್ಯತೆಗೆ ಕಾರಣ ಬಹಿರಂಗ; ಆತಂಕದಲ್ಲಿ ಫ್ಯಾನ್ಸ್!

ವಿಶ್ವಕಪ್ ಟೂರ್ನಿ ಬಳಿಕ ಟೀಂ ಇಂಡಿಯಾ ವೆಸ್ಟ್ ಇಂಡೀಸ್ ಪ್ರವಾಸ ಕೈಗೊಂಡಿತ್ತು. ಆದರೆ ಧೋನಿ ವಿಂಡೀಸ್ ಪ್ರವಾಸದಿಂದ ಹಿಂದೆ ಸರಿದು, ಭಾರತೀಯ ಸೇನೆ ಸೇರಿಕೊಂಡಿದ್ದರು. 15 ದಿನಗಳ ಕಾಲ ಭಾರತೀಯ ಸೇನೆ ಜೊತೆ ಕಾಶ್ಮೀರದ ಗಡಿಯಲ್ಲಿ ಗಸ್ತು ತಿರುಗಿದ್ದರು. ದೇಶ ಸೇವೆಯಿಂದ ವಾಪಾಸ್ಸಾದ ಧೋನಿ, ಸೌತ್ ಆಫ್ರಿಕಾ ವಿರುದ್ಧದ ಸರಣಿಯಿಂದಲೂ ಹಿಂದೆ ಸರಿದಿದ್ದರು.

ಇದನ್ನೂ ಓದಿ: ಧೋನಿ ನಿವೃತ್ತಿ ಒತ್ತಡ; ಯುವರಾಜ್ ಸಿಂಗ್ ಪ್ರತಿಕ್ರಿಯೆಗೆ ಎಲ್ಲರೂ ಗಪ್‌ಚುಪ್!

ಸದ್ಯ ಧೋನಿ ಬೆನ್ನು ನೋವಿನಿಂದ ಚೇತರಿಸಿಕೊಳ್ಳುತ್ತಿದ್ದ,ನವೆಂಬರ್ ವರೆಗೆ ವಿಶ್ರಾಂತಿ ಪಡೆಯಲಿದ್ದಾರೆ ಅನ್ನೋ ಮಾಹಿತಿ ಹೊರಬಿದ್ದಿದೆ. ಈ ಮೂಲಕ ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಗೂ ಅಲಭ್ಯರಾಗಲಿದ್ದಾರೆ ಅನ್ನೋ ಮಾತು ಕೇಳಿಬಂದಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಪ್‌ ತುಳಿತ ತನಿಖಾ ವರದಿ ಹೈಕೋರ್ಟ್‌ ಪರಾಮರ್ಶೆಗೆ
ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!