
ಲಂಡನ್(ಜೂ.24): ಟೀಮ್ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಎಮ್ ಎಸ್ ಧೋನಿಗೆ ಹೊಸ ಹೆಸರು ಇಡಲಾಗಿದೆ. ತಂಡದ ಸಹ ಆಟಗಾರ ಶಿಖರ್ ಧವನ್ ಧೋನಿ ಹಾಗೂ ಕೊಹ್ಲಿಗೆ ಹೊಸ ಹೆಸರಿಟ್ಟಿದ್ದಾರೆ.
ಎಮ್ ಎಸ್ ಧೋನಿಗೆ ರಾಮ ಎಂದು ಹೆಸರಿಟ್ಟಿರುವ ಧವನ್, ಕೊಹ್ಲಿಗೆ ಲಕ್ಷಣ ಎಂದು ನಾಮಕರಣ ಮಾಡಿದ್ದಾರೆ. ಇಷ್ಟೇ ಅಲ್ಲ, ಧವನ್ ಹಾಡು ಹೇಳೋ ಮೂಲಕ ಎಲ್ಲರ ಗಮನಸೆಳೆದಿದ್ದಾರೆ.
ಧೋನಿ ಹಾಗೂ ಕೊಹ್ಲಿ ನನ್ನ ಎರಡು ರತ್ನಗಳು ಎಂದು ಹೇಳಿರುವ ಧವನ್, ಹಾಡಿನ ಮೂಲಕ ವಿವರಿಸಿದ್ದಾರೆ. ಟೀಮ್ಇಂಡಿಯಾ ಇದೀಗ ಐರ್ಲೆಂಡ್ ಹಾಗೂ ಇಂಗ್ಲೆಂಡ್ ಪ್ರವಾಸಕ್ಕಾಗಿ ಇಂಗ್ಲೆಂಡ್‌ಗೆ ತೆರಳಿರುವ ಭಾರತೀಯ ಕ್ರಿಕೆಟಿಗರು ಸಿಕ್ಕ ಸಮಯದಲ್ಲಿ ಸಖತ್ ಎಂಜಾಯ್ ಮಾಡಿದ್ದಾರೆ.
ಭಾರತ ಜೂನ್ 27, 29 ರಂದು ಐರ್ಲೆಂಡ್ ವಿರುದ್ಧ 2 ಟಿ-ಟ್ವೆಂಟಿ ಪಂದ್ಯ ಆಡಲಿದೆ. ಇನ್ನು ಜುಲೈ 3 ರಿಂದ ಇಂಗ್ಲೆಂಡ್ ವಿರುದ್ಧ 3 ಟಿ-ಟ್ವೆಂಟಿ, 3 ಏಕದಿನ ಹಾಗೂ 5 ಟೆಸ್ಟ್ ಪಂದ್ಯ ಆಡಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.